ಮಂಗಳೂರು: ಹೊರವಲಯದ ಸುರತ್ಕಲ್ ನಲ್ಲಿ ನಿನ್ನೆ ರಾತ್ರಿ ಮತ್ತೊಂದು ನೈತಿಕ ಪೊಲೀಸ್ ಗಿರಿ ನಡೆದಿದೆ ಎನ್ನಲಾಗಿದೆ. ಬೈಕ್ನಲ್ಲಿ ತೆರಳುತಿದ್ದ ವೇಳೆ ಅನ್ಯ ಕೋಮಿನ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.
ಮುಕ್ಕಾದ ಶ್ರೀನಿವಾಸ್ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಮೊಹಮ್ಮದ್ ಯಾಸೀನ್ ಮತ್ತು ಅನ್ಸಿ ವಿನ್ನಿ ಡಯಾಸ್ ನಿನ್ನೆ ರಾತ್ರಿ ಅಪಾರ್ಟ್ ಮೆಂಟ್ ಒಂದಕ್ಕೆ ತೆರಳುತ್ತಿದ್ದಾಗ ಸಂಘಟನೆ ಕಾರ್ಯಕರ್ತರು ಬೈಕ್ ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಈ ಪ್ರಕರಣ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ತನಿಖೆ ನಡೆಸಿದ ಪೊಲೀಸರು 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.