
ತೇರದಾಳ ಪೊಲೀಸ್ ಠಾಣೆ, ಹಲ್ಲೆಗೊಳಗಾದ ವಿದ್ಯಾರ್ಥಿ.
ತೇರದಾಳ ಪಟ್ಟಣದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ ಪ್ರಕರಣ ಹಿನ್ನೆಲೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಿನ್ಸಿಪಾಲ್ ಮತ್ತು ಪಿಎಸ್ಐ ರಾಜು ಸೇರಿ, ಐವರು ಕಾನ್ಸ್ಟೇಬಲ್ಗಳು ಸೇರಿ 7 ಜನರ ವಿರುದ್ಧ FIR ದಾಖಲಿಸಲಾಗಿದೆ.
ಬಾಗಲಕೋಟೆ: ಕಾಲೇಜಿಗೆ ಟೋಪಿ ಹಾಕಿಕೊಂಡು ಬಂದ ವಿದ್ಯಾರ್ಥಿ ಮೇಲೆ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನಸ್ಟೇಬಲ್ಗಳಾದ ಗಣಿ ಪಿ, ಹೆಚ್. ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್ ಬಿ ಕಲಾಟೆ, ಎಸ್. ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ಸೇರಿ ಏಳು ಜನರ ವಿರುದ್ಧ ಜಿಲ್ಲೆಯ ರಬಕವಿ-ಬನಹಟ್ಟಿ ತಾಲ್ಲೂಕಿನ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಬನಹಟ್ಟಿಯ ಜೆಎಮ್ಎಫ್ಸಿ ನ್ಯಾಯಾಲಯದ ಆದೇಶದನ್ವಯ ಎಫ್ಐಆರ್ ದಾಖಲು ಮಾಡಲಾಗಿದೆ. ಫೆಬ್ರವರಿ 18 ರಂದು ತೇರದಾಳ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಘಟನೆ ನಡೆದಿದೆ.