ಸಾಂಕೇತಿಕ ಚಿತ್ರ
ಬೆಳಗಾವಿ: ವಿಧಾನಪರಿಷತ್ ಚುನಾವಣೆಗೆ ದಿನಾಂಕ ಘೋಷಣೆ ಆಗುತ್ತಿದ್ದಂತೆ ಬೆಳಗಾವಿಯಲ್ಲಿ ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಕೇಂದ್ರ ಚುನಾವಣಾ ಆಯೋಗ ಚುನಾವಣೆ ನಡೆಸಲು ದಿನಾಂಕ ಘೋಷಣೆ ಮಾಡಿದ್ದು, ಡಿಸೆಂಬರ್ 10ಕ್ಕೆ ಮತದಾನ ನಡೆಯಲಿದೆ. ದಿನಾಂಕ ಘೋಷಣೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಟಿಕೆಟ್ಗಾಗಿ ಲಾಬಿ ಶುರುವಾಗಿದೆ. ಕಾಂಗ್ರೆಸ್ ಟಿಕೆಟ್ ಬಯಸಿ 7 ಜನ ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮನಿಗೆ ಟಿಕೆಟ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಸಹೋದರ ಚನ್ನರಾಜ ಹಟ್ಟಿಹೊಳಿಗೆ ಟಿಕೆಟ್ ಕೊಡಿಸಲು ಲಕ್ಷ್ಮಿ ಹೆಬ್ಬಾಳ್ಕರ್ ವರಿಷ್ಠರನ್ನ ಭೇಟಿಯಾಗಿದ್ದಾರೆ. ದೆಹಲಿಗೆ ತೆರಳಿ ಕಾಂಗ್ರೆಸ್ ವರಿಷ್ಠರನ್ನು ಭೇಟಿ ಮಾಡಿ ಟಿಕೆಟ್ಗಾಗಿ ಮನವಿ ಮಾಡಿದ್ದಾರೆ. ಅಲ್ಲದೇ ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಭೇಟಿಯಾಗಿ ಚನ್ನರಾಜ ಹಟ್ಟಿಹೊಳಿ ಮನವಿ ಮಾಡಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆಪ್ತ ವೀರಕುಮಾರ್ ಪಾಟೀಲ್ ಸಹ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಸಚಿವ ಪ್ರಕಾಶ್ ಹುಕ್ಕೇರಿ, ವೀರಕುಮಾರ್ ಪಾಟೀಲ್, ಶಹಜಹಾನ್ ಡೊಂಗರಗಾಂವ್, ಡಾ.ಎನ್.ಎ. ಮಗದುಮ್ಮ, ಸುನಿಲ್ ಹನಮಣ್ಣವರ್, ಕಿರಣ್ ಸಾಧು ಸೇರಿ ಒಟ್ಟು 7 ಜನರು ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಬೆಳಗಾವಿ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ಎರಡು ಸ್ಥಾನಕ್ಕಾಗಿ ಚುನಾವಣೆ ನಡೆಯಲಿದೆ. ಈ ಪೈಕಿ ಒಂದು ಕ್ಷೇತ್ರದಲ್ಲಿ ಮಾತ್ರ ಸ್ಪರ್ಧಿಸಲು ಕಾಂಗ್ರೆಸ್ ಒಲವು ತೋರಿದೆ.
ಇಂದು ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ
ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ಕೇಳಿದ್ದೇನೆ. ಪ್ರಧಾನಿ ಭೇಟಿಗೆ ಸಮಯ ನೀಡಿದರೆ ಭೇಟಿಯಾಗುವೆ ಅಂತ ಬೆಂಗಳೂರಿನಲ್ಲಿ ಬಸವರಾಜ ಬೊಮ್ಮಾಯಿ ಹೇಳಿದರು. ದೆಹಲಿ ಪ್ರವಾಸದಲ್ಲಿ ಕೇಂದ್ರ ಸಚಿವರನ್ನ ಭೇಟಿಯಾಗುವೆ. ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಭೇಟಿಗೂ ಸಮಯ ಕೇಳಿದ್ದೇನೆ. ಸಂಪುಟ ವಿಸ್ತರಣೆಯ ಬಗ್ಗೆ ಯಾವುದೇ ಚರ್ಚೆ ಮಾಡಲ್ಲ ಅಂತ ಸಿಎಂ ತಿಳಿಸಿದ್ದಾರೆ.
ಇದನ್ನೂ ಓದಿ
Chikmagalur Naxals Arrested: ಕರ್ನಾಟಕ ಮೂಲದ ಇಬ್ಬರು ನಕ್ಸಲರು ಕೇರಳದಲ್ಲಿ ಅರೆಸ್ಟ್