
ಮಾಜಿ ಶಾಸಕ ಸಂಪಂಗಿ ಬೆನ್ನಿಗೆ ನಿಲ್ಲುವುದಾಗಿ ಭರವಸೆ ಕೊಟ್ಟ ಸಚಿವ ಮುನಿರತ್ನ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಸಿಗುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುವ ರಾಜಕೀಯ ನಾಯಕರುಗಳು ಇಂದು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಳ್ಳುವ ಮೂಲಕ ತಮ್ಮ ಹುಟ್ಟುಹಬ್ಬದಲ್ಲೂ ರಾಜಕೀಯ ಲಾಭ ಪಡೆಯುತ್ತಿದ್ದಾರೆ.
ಕೋಲಾರ: ಚುನಾವಣೆಯ ಹೊಸ್ತಿಲಲ್ಲಿರುವ ರಾಜ್ಯದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಅದರಲ್ಲೂ, ಜನರನ್ನು ಸೇರಿಸಿ ಅವರನ್ನು ಖುಷಿ ಪಡಿಸಲು ಸಿಗುವ ಸಣ್ಣದೊಂದು ಅವಕಾಶವನ್ನು ಬಿಡದ ರಾಜಕೀಯ ಮುಖಂಡರು, ತಮ್ಮ ಹುಟ್ಟುಹಬ್ಬದಲ್ಲೂ ತಮ್ಮ ಬಲಪ್ರದರ್ಶನ ಮಾಡುವ ಮೂಲಕ ತಮ್ಮ ವಿರೋಧಿಗಳಿಗೆ ಸಂದೇಶ ರವಾನಿಸಿದ್ದಾರೆ.
ಹುಟ್ಟು ಹಬ್ಬದ ಹೆಸರಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಬಲ ಪ್ರದರ್ಶನ
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕ್ಷೇತ್ರಗಳಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈ ಹಿನ್ನೆಲೆಯಲ್ಲಿ ಸಿಗುವ ಪ್ರತಿಯೊಂದು ಅವಕಾಶವನ್ನು ಬಳಸಿಕೊಳ್ಳುವ ರಾಜಕೀಯ ನಾಯಕರುಗಳು ಇಂದು ತಮ್ಮ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಿಕೊಳ್ಳುವ ಮೂಲಕ ತಮ್ಮ ಹುಟ್ಟುಹಬ್ಬದಲ್ಲೂ ರಾಜಕೀಯ ಲಾಭ ಪಡೆಯುತ್ತಿದ್ದಾರೆ. ಇವತ್ತು ಕೆಜಿಎಫ್ ಮಾಜಿ ಶಾಸಕ ವೈ ಸಂಪಂಗಿ ತಮ್ಮ ಹುಟ್ಟುಹಬ್ಬದ ಪ್ರಯುಕ್ತ ಅದ್ದೂರಿ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿ, ಸಚಿವ ಮುನಿರತ್ನ ಸೇರಿದಂತೆ ತಮ್ಮ ನೆಚ್ಚಿನ ನಾಯಕರುಗಳನ್ನು ತಮ್ಮ ಕ್ಷೇತ್ರಕ್ಕೆ ಕರೆಸಿಕೊಂಡು ಜನರೊಟ್ಟಿಗೆ ಸಂಭ್ರಮಿಸಿದ್ದಾರೆ. ಹುಟ್ಟುಹಬ್ಬ ಆಚರಣೆಗಾಗಿಯೇ ಕೆಜಿಎಫ್ ತಾಲ್ಲೂಕು ನಾಗಶೆಟ್ಟಿಹಳ್ಳಿ ಗ್ರಾಮದ ತಮ್ಮ ತೋಟದಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು. ಸಾವಿರಾರು ಜನರಿಗೆ ಮುದ್ದೆ ಹಾಗೂ ಮಟನ್, ಚಿಕನ್ ಊಟ ಹಾಕಿಸುವ ಜೊತೆಗೆ ಅದ್ದೂರಿ ಆರ್ಕೆಸ್ಟ್ರಾ ಆಯೋಜನೆ ಮಾಡಿ ಜನರನ್ನು ರಂಜಿಸಿದ್ದಾರೆ.