ವಿಧಾನಸಭೆ ಸಚಿವಾಲಯ ಬಂದ್ಗೆ ವಿಧಾನಸೌಧ ಸಿಬ್ಬಂದಿಯಿಂದ ವಿರೋಧ
ವಿಧಾನಸೌಧದ ಸಚಿವರು ಮತ್ತು ಇತರೆ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗ ಸಹ ಬಂದ್ ಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಚಿವಾಲಯ ಬಂದ್ ಸಂಪೂರ್ಣ ಕಾನೂನು ಬಾಹಿರ ಮತ್ತು ಸ್ವಾರ್ಥಕ್ಕಾಗಿ ಮಾಡುತ್ತಿರುವ ಬಂದ್ ಇದಾಗಿದೆ ಎಂದು ಹೇಳಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ಸರ್ಕಾರದ ಸಚಿವಾಲಯ ನೌಕರರ ಸಂಘ ಶುಕ್ರವಾರ ಆಡಳಿತದ ಶಕ್ತಿ ಕೇಂದ್ರ ಸಚಿವಾಲಯದ ಬಂದ್ಗೆ ಕರೆ ನೀಡಿದ್ದು, ಇದಕ್ಕೆ ವಿಧಾನಸೌಧ ಸಿಬ್ಬಂದಿಯಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಜತೆಗೆ ಈ ಬಂದ್ ಕಾನೂನು ಬಾಹಿರ ಎಂದು ರಾಜ್ಯ ಸರ್ಕಾರ ಹೇಳಿದೆ. ಬಂದ್ ನಲ್ಲಿ ಪಾಲ್ಗೊಳ್ಳಬಾರದು. ಕಚೇರಿಗೆ ಹಾಜರಾಗುವವರನ್ನು ತಡೆಯುವುದು ಸರಿಯಲ್ಲ. ಇಂತಹ ಪ್ರಯತ್ನಗಳು ನಡೆದರೆ ಸಂಬಂಧಪಟ್ಟವರ ಮೇಲೆ ಕ್ರಿಮಿನಲ್ ಮೊಕದ್ದಮೆ ಹೂಡುವುದಾಗಿ ರಾಜ್ಯದ ಮುಖ್ಯಕಾರ್ಯರ್ಶಿ ಪಿ. ರವಿ ಕುಮಾರ್ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದ ಸಚಿವರು ಮತ್ತು ಇತರೆ ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಹಾಗೂ ಅಧಿಕಾರಿ ವರ್ಗ ಸಹ ಬಂದ್ ಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಚಿವಾಲಯ ಬಂದ್ ಸಂಪೂರ್ಣ ಕಾನೂನು ಬಾಹಿರ ಮತ್ತು ಸ್ವಾರ್ಥಕ್ಕಾಗಿ ಮಾಡುತ್ತಿರುವ ಬಂದ್ ಇದಾಗಿದೆ ಎಂದು ಹೇಳಿದ್ದಾರೆ.
ಬಂದ್ ನಲ್ಲಿ ಪಾಲ್ಗೊಳ್ಳಬಾರದು ಎಂದು ಸರ್ಕಾರ ಆದೇಶ ಜಾರಿಮಾಡಿದ್ದು, ಹೀಗಿರುವಾಗ ಸಿಬ್ಬಂದಿ/ನೌಕರರು ಇದನ್ನು ಪಾಲನೆ ಮಾಡಬೇಕೋ ಅಥವಾ ನೌಕರರ ಸಂಘದವರು ಹೇಳಿದಂತೆ ಸರ್ಕಾರ ನಡೆದು ಕೊಳ್ಳಬೇಕೋ ಎಂಬ ಗೊಂದಲವೂ ಸೃಷ್ಟಿಯಾಗಿದೆ. ಇದರ ಜತೆಗೆ ಸಾರ್ವಜನಿಕ ವಲಯಕ್ಕೆ ಈ ಬೆಳವಣಿಗೆ ತೊಂದರೆಯಾಗಿ ಪರಿಣಮಿಸಲಿದೆ ಎನ್ನುವ ಆತಂಕ ವ್ಯಕ್ತವಾಗಿದೆ.