ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ಸ್ಥಾಪನೆಗೆ ಮುಂದಾದ ರಾಜ್ಯ ಸರ್ಕಾರ

ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ಸ್ಥಾಪನೆಗೆ ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ವಿಧಾನಸೌಧದ ಆವರಣದ ಮುಂದೆ ಬಸವಣ್ಣ ಪುತ್ಥಳಿ ಸ್ಥಾಪನೆಗೆ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಬಸವಣ್ಣನ ಪುತ್ಥಳಿ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸಲು ಸರ್ಕಾರ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯದರ್ಶಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.

ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ಸ್ಥಾಪನೆಯಿಂದ ಪ್ರಜಾಪ್ರಭುತ್ವದ ವ್ಯವಸ್ಥೆಗೆ ಮುಕುಟವಾಗುತ್ತದೆ ಎಂದು ಸರ್ಕಾರ ತನ್ನ ಆದೇಶಪ್ರತಿಯಲ್ಲಿ ಉಲ್ಲೇಖಿಸಿದೆ. ಬಸವಣ್ಣ 12 ನೇ ಶತಮಾನದ ಸಮಾನತೆಯ ಹರಿಕಾರ ಎನ್ನಿಸಿಕೊಂಡವರು.

The post ವಿಧಾನಸೌಧದ ಆವರಣದಲ್ಲಿ ಬಸವಣ್ಣನ ಪುತ್ಥಳಿ ಸ್ಥಾಪನೆಗೆ ಮುಂದಾದ ರಾಜ್ಯ ಸರ್ಕಾರ appeared first on News First Kannada.

Source: newsfirstlive.com

Source link