ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಬಳಿಕ ಕಣ್ಣೀರು ಹಾಕಿದ ಟಿ.ಎ. ಶರವಣ | Vidhan Parishad Election: After the nomination, the tearful TA. Sharavana


ವಿಧಾನ ಪರಿಷತ್ ಚುನಾವಣೆ: ನಾಮಪತ್ರ ಸಲ್ಲಿಕೆ ಬಳಿಕ ಕಣ್ಣೀರು ಹಾಕಿದ ಟಿ.ಎ. ಶರವಣ

ವಿಧಾನ ಪರಿಷತ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಟಿ.ಎ ಶರವಣ

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಟಿ.ಎ ಶರವಣರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು, ಎರಡನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ಜೆಡಿಎಸ್​​ ಅಭ್ಯರ್ಥಿಯಾಗಿ ಟಿ.ಎ ಶರವಣ ಆಯ್ಕೆಯಾಗಿದ್ದಾರೆ. ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಮಂಗಳವಾರ ಟಿ.ಎ ಶರವಣರನ್ನು ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದು, ಎರಡನೇ ಬಾರಿಗೆ ವಿಧಾನ ಪರಿಷತ್​ಗೆ ಆಯ್ಕೆಯಾಗಿದ್ದಾರೆ. ಇಂದು ನಾಮಪತ್ರ ಸಲ್ಲಿಕೆ ಬಳಿಕ ಟಿ.ಎ ಶರವಣ ಮಾತನಾಡಿದ್ದು, ಸಣ್ಣ ಮಟ್ಟದ ಕಾರ್ಯಕರ್ತ ನಾನು. ಆದರೆ ಜೆಡಿಎಸ್ ವರಿಷ್ಟರು ನನ್ನ ಗುರುತಿಸಿ ಎರಡನೇ ಬಾರಿಗೆ ಅವಕಾಶ ಕೊಟ್ಟಿದ್ದಾರೆ. ಮತ್ತೆ ಮೂರನೇ ಬಾರಿಗೆ ಕುಮಾರಣ್ಣನ ಪಟ್ಟಾಭಿಷೇಕ ಆಗಬೇಕು ಅನ್ನೋದೇ ನನ್ನ ಆಸೆ. ಅದಕ್ಕಾಗಿ ನಾನು ಎಲ್ಲ ಶ್ರಮಹಾಕಿ ಕೆಲಸ ಮಾಡುತ್ತೇನೆ ಎಂದು ಕಣ್ಣೀರು ಹಾಕಿದ್ದಾರೆ. ಬಿಬಿಎಂಪಿಯಲ್ಲೂ ಚುಕ್ಕಾಣಿ ಹಿಡಿಯುವುದಕ್ಕೆ ಕೆಲಸ ಮಾಡುತ್ತೇವೆ. ಬಿಜೆಪಿ ಕಾಂಗ್ರೆಸ್ ಎರಡೂ ರಾಷ್ಟ್ರೀಯ ಪಕ್ಷವನ್ನು ಜನ‌ ತಿರಸ್ಕಾರ ಮಾಡಿದ್ದಾರೆ. ಹೀಗಾಗಿ ನಮ್ಮೆಲ್ಲ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಹೇಳಿದರು.

TV9 Kannada


Leave a Reply

Your email address will not be published. Required fields are marked *