
ಪ್ರಾತಿನಿಧಿಕ ಚಿತ್ರ
ಬ್ರಾಹ್ಮಣ, ಪಂಚಮಸಾಲಿ ಲಿಂಗಾಯತ, ಹಿಂದುಳಿದ ವರ್ಗ ಮತ್ತು ಮಹಿಳಾ ಕೋಟಾದಡಿ ಅವಕಾಶ ನೀಡುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಒಂದು ಸ್ಥಾನ ದೊರೆಯಲಿದೆ.
ಬೆಂಗಳೂರು: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇನ್ನೂ ಅಧಿಕೃತವಾಗಿ ಪ್ರಕಟವಾಗಿಲ್ಲ. ಈಗಾಗಲೇ ಕೆಲವು ಸಂಭಾವ್ಯ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಕೆಗೆ ಸಿದ್ಧತೆ ಮಾಡಿಕೊಳ್ಳುವಂತೆ ವರಿಷ್ಠರಿಂದ ಆಂತರಿಕ ಸೂಚನೆ ನೀಡಲಾಗಿತ್ತು. ವರಿಷ್ಠರ ಆಂತರಿಕ ಸೂಚನೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಕೆಗೆ ಸಂಭಾವ್ಯ ಅಭ್ಯರ್ಥಿಗಳು ಸಿದ್ಧತೆ ಮಾಡಿಕೊಂಡಿದ್ದರು. ಆದರೆ ಜಾತಿವಾರು ಆಧಾರದಲ್ಲಿ ಅಭ್ಯರ್ಥಿಗಳ ಆಯ್ಕೆಗೆ ಹೈಕಮಾಂಡ್ ಮುಂದಾಗಿದೆ. ಬ್ರಾಹ್ಮಣ, ಪಂಚಮಸಾಲಿ ಲಿಂಗಾಯತ, ಹಿಂದುಳಿದ ವರ್ಗ ಮತ್ತು ಮಹಿಳಾ ಕೋಟಾದಡಿ ಅವಕಾಶ ನೀಡುವ ಸಾಧ್ಯತೆಯಿದ್ದು, ಉತ್ತರ ಕರ್ನಾಟಕ ಭಾಗಕ್ಕೆ ಒಂದು ಸ್ಥಾನ ದೊರೆಯಲಿದೆ. ಬಿಜೆಪಿ ಮಹಿಳಾ ಮೋರ್ಛಾ ರಾಜ್ಯಾಧ್ಯಕ್ಷೆ ಗೀತಾ ವಿವೇಕಾನಂದ, ರಾಜ್ಯ ಖಜಾಂಚಿ ಸುಬ್ಬ ನರಸಿಂಹ, ರಾಜ್ಯ ಕಾರ್ಯದರ್ಶಿ ಕೇಶವ ಪ್ರಸಾದ್ ಮತ್ತು ರಾಜ್ಯ ಶಿಸ್ತು ಸಮಿತಿ ಅಧ್ಯಕ್ಷ ಲಿಂಗರಾಜ್ ಪಾಟೀಲ್ ಇಷ್ಟು ಜನರಲ್ಲಿ ಯಾರಿಗೆ ಟಿಕೆಟ್ ಸಿಗುತ್ತದೆ ನೋಡಬೇಕಿದೆ. ಕೊನೆಯ ಕ್ಷಣದಲ್ಲಿ ಹೈಕಮಾಂಡ್ನಿಂದ ಅಚ್ಚರಿಯ ಅಭ್ಯರ್ಥಿಗಳು ಪ್ರಕಟಗೊಳ್ಳುವ ಸಾಧ್ಯತೆ ಕೂಡ ಇದೆ ಎನ್ನಲಾಗುತ್ತಿದೆ.