ಬೆಂಗಳೂರು: ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅವರು ಜ್ವರದಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ನಿನ್ನೆ ರಾತ್ರಿಯಿಂದ ಸಿದ್ದರಾಮಯ್ಯ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್​ಗೂ ಒಳಪಟ್ಟಿದ್ದಾರೆ ಎನ್ನಲಾಗಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅವರ ಆಪ್ತ ವೈದ್ಯ ಡಾ.ರವಿ ಕುಮಾರ್ ಅವರು, ಆರೋಗ್ಯ ತಪಾಸಣೆ ನಡೆಸಿದ್ದು, ಇಂದು ಇಡೀ ದಿನ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ.

ವೈದ್ಯರ ಸಲಹೆ ಮೇರೆಗೆ ತಮ್ಮ ನಿವಾಸದಲ್ಲಿ ಸಿದ್ದರಾಮ್ಯಯ್ಯ ವಿಶ್ರಾಂತಿ ಪಡೆಯುತ್ತಿದ್ದಾರೆ.

ಬೆಂಗಳೂರಿನ ಸಂಚಾರ ಕಾರ್ಯಕ್ರಮ ರದ್ದು

ಅನಾರೋಗ್ಯ ಹಿನ್ನಲೆಯಲ್ಲಿ ಇಂದು ನಿಗದಿಯಾಗಿದ್ದ ಎಲ್ಲಾ ಕಾರ್ಯಕ್ರಮಗಳನ್ನು ಸಿದ್ದರಾಮಯ್ಯ ಅವರು ರದ್ದು ಮಾಡಿದ್ದಾರೆ. ಇಂದು ಬೆಂಗಳೂರಿನ ನಾನಾ ಕ್ಷೇತ್ರಗಳಿಗೆ ತೆರಳಿ ಉಚಿತ ದಿನಸಿ ಕಿಟ್ ವಿತರಿಸಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇನ್ನು ತಮ್ಮ ನಿವಾಸದಲ್ಲಿಯೂ ಸಹ ಇಂದು ಯಾರನ್ನೂ ಭೇಟಿ ಮಾಡದಿರಲು ತೀರ್ಮಾನ ತೆಗೆದುಕೊಂಡಿದ್ದಾರೆ. ಸಿದ್ದರಾಮಯ್ಯ ಅನುಪಸ್ಥಿತಿಯಲ್ಲಿ ಬೆಂಗಳೂರಿನ ನಾನಾ ಕ್ಷೇತ್ರಗಳಿಗೆ ತೆರಳಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಿಟ್​ ವಿತರಣೆ ಮಾಡಲಿದ್ದಾರೆ.

The post ವಿಪಕ್ಷ ನಾಯಕ ಸಿದ್ದರಾಮಯ್ಯಗೆ ಅನಾರೋಗ್ಯ, ಕೊರೊನಾ ಟೆಸ್ಟ್​ appeared first on News First Kannada.

Source: newsfirstlive.com

Source link