ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ದಿಢೀರ್ ರಾಜೀನಾಮೆ ಪ್ರಕಟಿಸಿ ಶಾಕ್ ನೀಡಿದ್ದಾರೆ. ಸೆಪ್ಟೆಂಬರ್ನಲ್ಲಿ ಟಿ-20 ನಾಯಕತ್ವ ತ್ಯಜಿಸಿದ್ದ ಕೊಹ್ಲಿ ಬಳಿಕ ಏಕದಿನ ಕ್ಯಾಪ್ಟನ್ಸಿಗೆ ಗುಡ್ಬೈ ಎಂದಿದ್ದರು. ಹೀಗಾಗಿ ಕೊಹ್ಲಿ ಟೆಸ್ಟ್ ತಂಡವನ್ನು ಮುನ್ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಈಗ ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವವನ್ನೂ ತೊರೆದು ಅಚ್ಚರಿ ಮೂಡಿಸಿದ್ದಾರೆ. ಈ ವಿದ್ಯಮಾನಗಳ ನಡುವೆ ವಿರಾಟ್ ರಾಜೀನಾಮೆ ನಿರ್ಧಾರ ಪ್ರಕಟಿಸೋ ಮುನ್ನ ಕೇಂದ್ರ ಗೃಹ ಮಂತ್ರಿ ಅಮಿತ್ ಶಾ ಪುತ್ರನಿಗೆ ಕರೆ ಮಾಡಿದ್ದರು ಎನ್ನಲಾಗಿದೆ.
ಬಿಸಿಸಿಐ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸುತ್ತಿರೋ ಅಮಿತ್ ಶಾ ಪುತ್ರ ಜಯ್ ಶಾಗೆ ಕರೆ ಮಾಡಿ ರಾಜೀನಾಮೆ ನೀಡೋ ಬಗ್ಗೆ ನಿನ್ನೆ ಮಧ್ಯಾಹ್ನ ಕೊಹ್ಲಿ ತಿಳಿಸಿದ್ದರು ಎನ್ನಲಾಗಿದೆ. ಅವರು ಕರೆ ಮಾಡಿದ ಕೆಲ ಘಂಟೆಗಳಲ್ಲಿ ಬಿಸಿಸಿಐ ವಿರಾಟ್ ನಿರ್ಧಾರವನ್ನು ಸ್ವಾಗತಿಸಿತ್ತು ಎನ್ನಲಾಗಿದೆ.
ಜೊತೆಗೆ ಕೊಹ್ಲಿ ತಮ್ಮ ನಿರ್ಧಾರವನ್ನು ಮೊದಲಿಗೆ ಟೀಂ ಇಂಡಿಯಾದ ಕೋಚ್ ಆಗಿರುವ ರಾಹುಲ್ ದ್ರಾವಿಡ್ ಅವರಿಗೆ ತಿಳಿಸಿದ್ದರು ಎನ್ನಲಾಗಿದೆ. ಇತ್ತ ಕೊಹ್ಲಿ ರಾಜೀನಾಮೆ ಅಧಿಕೃತವಾಗಿ ರಾಜೀನಾಮೆ ಪ್ರಕಟಿಸುತ್ತಿದ್ದಂತೆ ಪ್ರತಿಕ್ರಿಯಿಸಿದ ಬಿಸಿಸಿಐ ಅಧ್ಯಕ್ಷ ಗಂಗೂಲಿ ಇದು ಅವರ ವೈಯಕ್ತಿಕ ನಿರ್ಧಾರ ಅದನ್ನು ಮಂಡಳಿ ಗೌರವಿಸುತ್ತೆ ಎಂದಿದ್ದರು.