ವಿವಿಧ ಬೇಡಿಕೆ ಆಗ್ರಹಿಸಿ ರಾಜ್ಯಾದ್ಯಂತ ಹೆದ್ದಾರಿ ತಡೆದು ಪ್ರತಿಭಟನೆಗೆ ನಿಂತ ರೈತರು


ಕೃಷಿ ಕಾಯ್ದೆಯನ್ನ ಅಧಿಕೃತವಾಗಿ ಹಿಂಪಡೆಯೋ‌ದ್ರಾ ಜೊತೆಗೆ ಬೆಂಬಲ ಬೆಲೆ ಖಾತ್ರಿಪಡಿಸುವಂತೆ ಆಗ್ರಹಿಸಿ ರೈತರು ದೆಹಲಿಯಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ದೆಹಲಿ ಪ್ರತಿಭಟನೆ ಬೆಂಬಲಿಸಿ, ರಾಜ್ಯದಲ್ಲೂ ರೈತರು ವಿವಿಧ ಬೇಡಿಕೆಗಳಿಗಾಗಿ ರಾಜ್ಯ ಹೆದ್ದಾರಿ ಬಂದ್​​​ಗೆ ಕರೆ ಕೊಟ್ಟಿದ್ದಾರೆ.

ರಾಮನಗರ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಚಳುವಳಿಗೆ ವರ್ಷ ತುಂಬಿದ ಹಿನ್ನೆಲೆ ರಾಮನಗರದ ಎಪಿಎಂಸಿ ವೃತ್ತದ ಬಳಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸಿದ್ದಾರೆ. ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಮುನಿರಾಜು ನೇತೃತ್ವದಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ತಡೆದ ರೈತರು ಕೇಂದ್ರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಭೂಸುಧಾರಣೆ ತಿದ್ದುಪಡಿ ಕಾಯ್ದೆ, ಎಪಿಎಂಸಿ ತಿದ್ದುಪಡಿ ಕಾಯ್ದೆ, ಗೋಹತ್ಯೆ ಕಾಯ್ದೆ ಹಿಂಪಡೆಯಲು ಆಗ್ರಹಿಸಿ ಜಿಲ್ಲೆಯ ಮೂರು ಟೋಲ್ ಗೇಟ್‌ಗಳಲ್ಲಿ ಹೆದ್ದಾರಿ ತಡೆದು ರೈತ ಸಂಘಟನೆಗಳು ಪ್ರತಿಭಟನೆಗೆ ನಿಂತಿವೆ. ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಭಾರತೀಯ ಕೃಷಿಕ ಸಮಾಜ ಸೇರಿ ವಿವಿಧ ರೈತಪರ ಸಂಘಟನೆಗಳ ರೈತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ತಾಲೂಕಿನ ಹಿರೇಬಾಗೇವಾಡಿ ಟೋಲ್‌ಗೇಟ್, ಹತ್ತರಗಿ ಟೋಲ್​ಗೇಟ್ ಪ್ಪಾಣಿ ತಾಲೂಕಿನ ಕೊಗನೊಳ್ಳಿ ಟೋಲ್‌ಗೇಟ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆದಲಾಗಿದೆ. ಈ ವೇಳೆ ರೈತ ಹೋರಾಟಗಾರ್ತಿ ಓರ್ವರು ಬಾರುಕೋಲಿನಿಂದ ಬಡೆದುಕೊಂಡು ವಿನೂತನ ಪ್ರತಿಭಟನೆ ಮಾಡಿದ್ದಾರೆ. ಕೆಲ ಹೊತ್ತಿನ ಬಳಿಕ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಮೈಸೂರು: ಭೂ ಸುಧಾರಣೆ, ಎಪಿಎಂಸಿ ತಿದ್ದುಪಡಿ ಕಾಯ್ದೆ ವಾಪಾಸ್‌‌ಗೆ ಆಗ್ರಹಿಸಿ ಸಾಂಸ್ಕೃತಿಕ ನಗರಿಯಲ್ಲಿ ಕೂಡ ಪ್ರತಭಟನೆ ಜೋರಾಗಿದ್ದು ಮೈಸೂರು-ಊಟಿ ಹೆದ್ದಾರಿ ತಡೆದು ಬಿಸಿ ಮುಟ್ಟಿಸಿದ್ದಾರೆ.

ಸಂಯುಕ್ತ ಕಿಸಾನ್ ಮೋರ್ಚಾ,ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು ಗೋವುಗಳನ್ನ ರಸ್ತೆಗೆ‌ ತಂದು ನಿಲ್ಲಿಸಿ ರೈತರು ಆಕ್ರೋಶ ಹೊರಹಾಕಿದ್ದಾರೆ.

News First Live Kannada


Leave a Reply

Your email address will not be published. Required fields are marked *