ನೆನ್ನೆ ನ್ಯೂಜಿಲೆಂಡ್ ವಿರುದ್ಧ ಫೈನಲ್ ಹಣಾಹಣಿಯಲ್ಲಿ ಗೆದ್ದ ಆಸ್ಟ್ರೇಲಿಯಾ, ಚೊಚ್ಚಲ ಐಸಿಸಿ ಟಿ20 ವಿಶ್ವಕಪ್ ಕಿರೀಟಕ್ಕೆ ಮುತ್ತಿಕ್ಕಿದೆ. ಕಿವೀಸ್ ನೀಡಿದ ಸವಾಲಿನ ಗುರಿಯನ್ನ ಚೇಸ್ ಮಾಡಿದ ಆಸಿಸ್, 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿ ಗೆಲುವಿನ ನಗೆ ಬೀರಿತು.
ಇನ್ನು ಕ್ರಿಕೆಟ್ ಮಹಾಯುದ್ಧಕ್ಕೆ ತೆರೆ ಬೀಳುತ್ತಿದ್ದಂತೆ ಪಾಕ್ನ ಮಾಜಿ ವೇಗಿ ಶೋಯೆಬ್ ಅಖ್ತರ್ ಈ ಬಾರಿಯ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನಕ್ಕೆ ಅನ್ಯಾಯ ಎಸಗಲಾಗಿದೆ ಎಂದಿದ್ದಾರೆ. ಪಂದ್ಯದ ಬಳಿಕ ಪ್ರಶಸ್ತಿ ವಿತರಣೆ ಮಾಡಿದ ಐಸಿಸಿ ಆಸ್ಟ್ರೇಲಿಯಾ ಆಟಗಾರ ಡೇವಿಡ್ ವಾರ್ನರ್ಗೆ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ನೀಡಲಾಯಿತು. ಆದರೆ ಈ ಕುರಿತು ಕ್ಯಾತೆ ಎತ್ತಿರುವ ರಾವಲ್ಪಿಂಡಿ ಎಕ್ಸ್ಪ್ರೆಸ್ ಶೋಯೆಬ್ ಅಖ್ತರ್ ಐಸಿಸಿ ಟೂರ್ನಿಯಲ್ಲಿ ಪಾಕ್ ಆಟಗಾರನಿಗೆ ಅನ್ಯಾಯ ಮಾಡಿದೆ ಎಂದು ಟ್ವೀಟ್ ಮಾಡಿದ್ದಾರೆ.
Was really looking forward to see @babarazam258 becoming Man of the Tournament. Unfair decision for sure.
— Shoaib Akhtar (@shoaib100mph) November 14, 2021
ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದವರ ಪಟ್ಟಿಯಲ್ಲಿ ಪಾಕ್ ಕ್ಯಾಪ್ಟನ್ ಬಾಬರ್ ಅಝಮ್ 6 ಪಂದ್ಯಗಳಿಂದ 303 ಗಳಿಸಿದ್ದಾರೆ, ಮೊದಲ ಸ್ಥಾನದಲ್ಲಿದ್ದಾರೆ. ಆದರೆ ಡೇವಿಡ್ ವಾರ್ನರ್ ಫೈನಲ್ ಪಂದ್ಯದಲ್ಲಿ ಅಮೋಘ 38 ಎಸೆತಗಳಲ್ಲಿ 53 ರನ್ ಗಳಿಸಿ ಒಟ್ಟು 289 ರಣ್ಗಳಿಂದ ಎರಡನೇ ಸ್ಥಾನದಲ್ಲಿದ್ದರು. ಆದರೆ ಅತಿ ಹೆಚ್ಚು ರನ್ಗಳಿಸಿದವರ ಪಟ್ಟಿಯಲ್ಲಿದ್ದ ಬಾಬರ್ ಅಝಮ್ ಹೆಸರನ್ನು ಕೈಬಿಟ್ಟು ವಾರ್ನರ್ಗೆ ಪ್ರಶಸ್ತಿಯನ್ನು ನೀಡಿರೋದು ಸರಿಯಲ್ಲ ಎಂದು ಶೋಯೆಬ್ ಅಖ್ತರ್ ಹೇಳಿದ್ದಾರೆ.