ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022: ರಾಷ್ಟ್ರಪತಿ ಮುರ್ಮು ಉದ್ಘಾಟನೆ, ವೇದಿಕೆಯಲ್ಲಿ ಯಾರೆಲ್ಲಾ ಇರುತ್ತಾರೆ? | President droupadi murmu to inaugurated Mysore dasara 2022 list of dignitaries on the dias during inauguration

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಮೈಸೂರು ಜಿಲ್ಲಾಡಳಿತದಿಂದ ರಾಜ್ಯಪಾಲರಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಗಣ್ಯರ ತಂಡ ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಗೆಹ್ಲೋಟ್‌ ಅವರಿಗೆ ಆಹ್ವಾನ ನೀಡಿತು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022: ರಾಷ್ಟ್ರಪತಿ ಮುರ್ಮು ಉದ್ಘಾಟನೆ, ವೇದಿಕೆಯಲ್ಲಿ ಯಾರೆಲ್ಲಾ ಇರುತ್ತಾರೆ?

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ 2022: ರಾಷ್ಟ್ರಪತಿ ಮುರ್ಮು ಉದ್ಘಾಟನೆ, ವೇದಿಕೆಯಲ್ಲಿ ಯಾರೆಲ್ಲಾ ಇರುತ್ತಾರೆ?

ಮೈಸೂರು: ಈ ಬಾರಿಯ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸೆಪ್ಟೆಂಬರ್ 26ರಂದು ಚಾಲನೆ ಸಿಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು (President droupadi murmu ) ಅವರು ದಸರಾ ಮಹೋತ್ಸವ 2022 ಅನ್ನು (Mysore dasara 2022) ಉದ್ಘಾಟಿಸಲಿದ್ದಾರೆ. ಈ ಮಧ್ಯೆ, ವೇದಿಕೆಯಲ್ಲಿ ಭಾಗವಹಿಸುವ ಗಣ್ಯರ ಪಟ್ಟಿ ಬಹುತೇಕ ಅಂತಿಮಗೊಂಡಿದ್ದು, ಉದ್ಘಾಟನಾ ಕಾರ್ಯಕ್ರಮದ ವೇದಿಕೆಯಲ್ಲಿ 15 ಗಣ್ಯರಿಗೆ ಅವಕಾಶ ನೀಡಲಾಗಿದೆ.

ರಾಷ್ಟ್ರಪತಿ, ರಾಜ್ಯಪಾಲ, ಸಿಎಂ ಸೇರಿ 15 ಗಣ್ಯರಿಗೆ ಅವಕಾಶ ನೀಡಲಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು, ರಾಜ್ಯಪಾಲ ಥಾವರಚಂದ್ ಗೆಹ್ಲೋಟ್​​​, ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ, ಎ. ನಾರಾಯಣಸ್ವಾಮಿ ಮತ್ತು ಭಗವಂತ ಖೂಬಾ ವೇದಿಕೆಯಲ್ಲಿ ಆಸೀನರಾಗಲಿದ್ದಾರೆ. ಜೊತೆಗೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್​.ಟಿ. ಸೋಮಶೇಖರ್, ಸಚಿವರಾದ ಸುನಿಲ್​ ಕುಮಾರ್​, ಶಶಿಕಲಾ ಜೊಲ್ಲೆ, ಆನಂದ್ ಸಿಂಗ್​ ಹಾಗೂ ಶಾಸಕ ಜಿ.ಟಿ. ದೇವೇಗೌಡ, ಮೈಸೂರು ಮೇಯರ್ ಶಶಿಕುಮಾರ್​​ಗೆ ಸ್ಥಾನ ನೀಡಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2022ಕ್ಕೆ ಮೈಸೂರು ಜಿಲ್ಲಾಡಳಿತದಿಂದ ರಾಜ್ಯಪಾಲರಿಗೆ ಆಹ್ವಾನ ನೀಡಲಾಗಿದೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ನೇತೃತ್ವದಲ್ಲಿ ಗಣ್ಯರ ತಂಡ ಇಂದು ರಾಜಭವನಕ್ಕೆ ತೆರಳಿ ರಾಜ್ಯಪಾಲರಾದ ಗೆಹ್ಲೋಟ್‌ ಅವರಿಗೆ ಆಹ್ವಾನ ನೀಡಿತು.

ಇನ್ನು ದೇಶದ ಪ್ರಥಮ ಪ್ರಜೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದಸರಾ ಮಹೋತ್ಸವ ಉದ್ಘಾಟಿಸಲು ಕರ್ನಾಟಕ ಸರ್ಕಾರದ ಆಮಂತ್ರಣ ಅಂಗೀಕರಿಸಿದ್ದು, ಸದ್ಯದಲ್ಲೇ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ನಿಯೋಗ ದೆಹಲಿಗೆ ತೆರಳಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಆಹ್ವಾನ ನೀಡಲಿದೆ ಎಂದು ತಿಳಿದುಬಂದಿದೆ.

ತಾಜಾ ಸುದ್ದಿ

TV9 Kannada

Leave a Reply

Your email address will not be published.