ವೀಕೆಂಡ್ ಕರ್ಫ್ಯೂ ಬಗ್ಗೆ ಶುಕ್ರವಾರದ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ: ಸಚಿವ ಆರಗ ಜ್ಞಾನೇಂದ್ರ | Friday we will decide about Weekend Curfew says Araga jnanendra


ವೀಕೆಂಡ್ ಕರ್ಫ್ಯೂ ಬಗ್ಗೆ ಶುಕ್ರವಾರದ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ: ಸಚಿವ ಆರಗ ಜ್ಞಾನೇಂದ್ರ

ಆರಗ ಜ್ಞಾನೇಂದ್ರ (ಸಂಗ್ರಹ ಚಿತ್ರ)

ಶಿವಮೊಗ್ಗ: ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಜೊತೆ ಸಭೆ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ (Araga Jnanendra) ಮಾಧ್ಯಮದವರೊಂದಿಗೆ ಮಾತನಾಡಿದ್ದು, ಬೆಂಗಳೂರು ನಗರದಲ್ಲಿ ಕೊರೊನಾ ಪ್ರಕರಣ ಹೆಚ್ಚಾಗುತ್ತಿವೆ. ಕೊರೊನಾ ತಡೆಯುವ ನಿಟ್ಟಿನಲ್ಲಿ ಕ್ರಮದ ಕುರಿತು ಚರ್ಚೆ ಮಾಡಿದ್ದೇವೆ. ವೀಕೆಂಡ್ ಕರ್ಫ್ಯೂ (Weekend curfew) ಮುಂದುವರಿಕೆ ಬಗ್ಗೆ ಶುಕ್ರವಾರದ ಸಭೆಯಲ್ಲಿ ನಿರ್ಧಾರ ಮಾಡಲಾಗುತ್ತದೆ. ಹೋಂ ಐಸೋಲೇಷನ್​ನಲ್ಲಿದ್ದವರ ಮೇಲೆ ಹೆಚ್ಚಿನ ನಿಗಾ ವಹಿಸಲಾಗುತ್ತದೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಶಿವಮೊಗ್ಗದಲ್ಲಿ ಟಿವಿ9ಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ ನೀಡಿದ್ದು, ಸಿಎಂ ನೇತೃತ್ವದಲ್ಲಿ ಕೊವಿಡ್  ವರ್ಚುಲ್ ಸಭೆ ನಡೆದಿದೆ. ಸಭೆಯಲ್ಲಿ ಕೆಲವು ನಿರ್ಣಯ ತೆಗೆದುಕೊಳ್ಳಲಾಗಿದೆ. ಓಮಿಕ್ರಾನ್ ವೈರಸ್  ತುಂಬಾ ವೇಗವಾಗಿ ಹಬ್ಬುತ್ತಿದೆ. ಇದನ್ನು ತಡೆಯುವುದು ನಮಗೆ ಸವಾಲು. ಈ ನಿಟ್ಟಿನಲ್ಲಿ ಅಗತ್ಯದ ಕ್ರಮ  ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಸರಕಾರದಿಂದ ಮಕ್ಕಳಿಗೆ ಕೊವಿಡ್ ತಡೆಯುವ ಕಿಟ್​ಗಳನ್ನು ಪೂರೈಸಲು ಕ್ರಮಕೈಗೊಳ್ಳಾಗಿದೆ. ರಾಜ್ಯದ ಆಸ್ಪತ್ರೆಯಲ್ಲಿರುವ ಆಕ್ಸಿಜನ್ ಪ್ಲ್ಯಾಂಟ್​ಗಳ ಸ್ಥಿತಿಗತಿ ಪರಿಶೀಲಿಸಲು ಸೂಚನೆ ನೀಡಲಾಗಿದೆ. ಆಕ್ಸಿಜನ್ ಉತ್ಪಾದನೆ ವ್ಯವಸ್ಥೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. ನೈಟ್ ಕರ್ಫ್ಯೂ ರಾಜ್ಯದಲ್ಲಿ ಮುಂದೆವರೆಯುತ್ತದೆ. ಇನ್ನೂ ಶಾಲಾ, ಕಾಲೇಜ್, ಹಾಸ್ಪೇಲ್ ಬಂದ್ ಕುರಿತು ಆಯಾ ಜಿಲ್ಲಾಧಿಕಾರಿಗಳು ಮತ್ತು ಡಿಹೆಚ್​ಓ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಜನರು ಕೊರೊನಾ ನಿಯಮ ಪಾಲಿಸಿದರೆ ಲಾಕ್​ಡೌನ್​ ಅಗತ್ಯವಿಲ್ಲ: ಸಚಿವ ಉಮೇಶ್ ಕತ್ತಿ

ನಾವೆಲ್ಲ ಜನ ಸೇರಿಸಿ ಜಾತ್ರೆ, ಹಬ್ಬ ಮಾಡುವುದನ್ನು ನಿಲ್ಲಿಸಬೇಕು. ಜನರು ಕೊರೊನಾ ನಿಯಮ ಪಾಲಿಸಿದರೆ ಲಾಕ್​ಡೌನ್​ ಅಗತ್ಯವಿಲ್ಲ. ಲಾಕಡೌನ್ ಮಾಡದೆ ಇದ್ರೆ ಸ್ವಾಗತಾರ್ಹ. ಮಾಸ್ಕ್, ಸ್ಯಾನಿಟೈಜರ್ ಬಳಸಿ ಮುಂಜಾಗೃತೆಯಿಂದ ರಾಜ್ಯದ ಜನ ಇದ್ದರೆ, ಸರ್ಕಾರಕ್ಕೆ ಲಾಕ್​ಡೌನ್ ಮಾಡುವ ಅವಶ್ಯಕತೆ ಇಲ್ಲ ಎಂದು ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಅರಣ್ಯ ಹಾಗೂ ಆಹಾರ ಸಚಿವ ಉಮೇಶ ಕತ್ತಿ ಹೇಳಿಕೆ ನೀಡಿದ್ದಾರೆ.

TV9 Kannada


Leave a Reply

Your email address will not be published. Required fields are marked *