
ವೀಕೆಂಡ್ ಶಾಪಿಂಗ್: ಬ್ರಿಗೇಡ್ ರಸ್ತೆಯಲ್ಲಿ ಕಾಂಪ್ಲೆಕ್ಸ್ ನಿಂದ ಜಿಗಿದು ಯುವಕ-ಯುವತಿ ಆತ್ಮಹತ್ಯೆ ಯತ್ನ
ಶನಿವಾರ ವೀಕೆಂಡ್ ವೇಳೆ ಶಾಪಿಂಗ್ ಗೆ ಬಂದಿದ್ದ ಯುವಕ-ಯುವತಿ ಸಾರ್ವಜನಿಕರೆದುರೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯ ಶಾಂಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ.
ಬೆಂಗಳೂರು: ಶನಿವಾರ ವೀಕೆಂಡ್ ವೇಳೆ ಶಾಪಿಂಗ್ ಗೆ ಬಂದಿದ್ದ ಯುವಕ-ಯುವತಿ ಸಾರ್ವಜನಿಕರೆದುರೇ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬ್ರಿಗೇಡ್ ರಸ್ತೆಯ ಶಾಂಪಿಂಗ್ ಕಾಂಪ್ಲೆಕ್ಸ್ ನಿಂದ ಜಿಗಿದು ಆತ್ಮಹತ್ಯೆಗೆ ಮುಂದಾಗಿದ್ದಾರೆ. ಯುವತಿಯ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಆಕೆಯನ್ನು ಸ್ಥಳೀಯ ಕಬ್ಬನ್ ಪಾರ್ಕ್ ಪೊಲೀಸರು ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಯುವತಿಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.