ಬೆಂಗಳೂರು: ಮುಂಬೈ ಕರ್ನಾಟಕವನ್ನು ಕಿತ್ತೂರು ಕರ್ನಾಟಕ ಎಂದು ನಾಮಕರಣ ಮಾಡಿರುವ ಬೆನ್ನಲ್ಲೇ ನವೆಂಬರ್ 11ರಂದು ಅಂದರೆ ಇಂದು ಒನಕೆ ಓಬವ್ವ ಜಯಂತಿ ಆಚರಿಸಲು ರಾಜ್ಯ ಸರ್ಕಾರ ಆದೇಶ ನೀಡಿದೆ. ಅದರಂತೆ ಇಂದು ನಾಡಿನಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ವೀರವನಿತೆ ಒನಕೆ ಓಬವ್ವ ಅವರನ್ನ ನೆನಪಿಸಿಕೊಂಡಿದ್ದಾರೆ.
ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ.. ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ ಎಂದು ಮೋದಿ ಬಣ್ಣಿಸಿದ್ದಾರೆ.
I bow to the courageous Onake Obavva on the special occasion of her Jayanti. No one can ever forget the courage with which she fought hard to protect her people and culture. She inspires us as a symbol of our Nari Shakti.
— Narendra Modi (@narendramodi) November 11, 2021
ಓಬವ್ವಳ ದೇಶಪ್ರೇಮದ ಕಥೆ ಕೇಳುವಾಗ ಮೈ ಜುಮ್ಮೆನಿಸುತ್ತದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮದ್ದಹನುಮಪ್ಪನ ಹೆಂಡತಿ. ಇವರನ್ನು ಕನ್ನಡ ನಾಡಿನ ವೀರವನಿತೆಯರಾದ ಕಿತ್ತೂರು ಚೆನ್ನಮ್ಮ,ರಾಣಿ ಅಬ್ಬಕ್ಕ ರ ಸಾಲಿನಲ್ಲಿ ಪರಿಗಣಿಸಲಾಗುತ್ತದೆ. ಹೈದರಾಲಿಯು ಚಿತ್ರದುರ್ಗದ ಮೇಲೆ ಹಟಾತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು. ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದು ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೆ ಶತ್ರುವಿನ ಕತ್ತಿಗೆ ಬಲಿಯಾದರು. ಅಂದಿನಿಂದ ಅವರಿಗೆ ಒನಕೆ ಓಬವ್ವ ಎಂದು ಬಿರುದು ಸಿಕ್ಕಿತು.
ವೀರವನಿತೆ ಒನಕೆ ಓಬವ್ವ ಜಯಂತಿಯ ವಿಶೇಷ ಸಂದರ್ಭದಲ್ಲಿ ಅವರಿಗೆ ನಮನ ಸಲ್ಲಿಸುತ್ತೇನೆ. ತನ್ನ ಜನರು ಮತ್ತು ಸಂಸ್ಕೃತಿಯನ್ನು ರಕ್ಷಿಸಲು ಅವರು ತೋರಿದ ಧೈರ್ಯವನ್ನು ಎಂದಿಗೂ ಯಾರೊಬ್ಬರೂ ಮರೆಯಲು ಸಾಧ್ಯವಿಲ್ಲ. ಅವರು ನಮ್ಮ ನಾರಿ ಶಕ್ತಿಯ ಪ್ರತೀಕವಾಗಿ ನಮಗೆ ಸ್ಫೂರ್ತಿ ನೀಡುತ್ತಾರೆ.
— Narendra Modi (@narendramodi) November 11, 2021