ವೀರ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲು – Case registered against Rahul Gandhi by BSS leader for remarks against Veer Savarkar VD Savarkar


ಅಂಡಮಾನ್ ಜೈಲಿನಲ್ಲಿ ವೀರ್ ಸಾವರ್ಕರ್ ಇದ್ದಾಗ ಬ್ರಿಟಿಷರಿಗೆ ಪತ್ರ ಬರೆದು, ತಮ್ಮನ್ನು ಕ್ಷಮಿಸಿ ಜೈಲಿನಿಂದ ಬಿಡುಗಡೆ ಮಾಡಲು ಹೇಳಿದರು. ವೀರ್ ಸಾವರ್ಕರ್ ಅವರು ಬ್ರಿಟಿಷರಿಂದ ಪಿಂಚಣಿ ಪಡೆದರು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ವೀರ ಸಾವರ್ಕರ್ ಬಗ್ಗೆ ಅವಹೇಳನಕಾರಿ ಹೇಳಿಕೆ; ರಾಹುಲ್ ಗಾಂಧಿ ವಿರುದ್ಧ ಕೇಸ್ ದಾಖಲು

ರಾಹುಲ್ ಗಾಂಧಿ

ನವದೆಹಲಿ: ಭಾರತ್ ಜೋಡೋ ಯಾತ್ರೆಯ ವೇಳೆ ಮಹಾರಾಷ್ಟ್ರದಲ್ಲಿ ಸ್ವಾತಂತ್ರ್ಯ ಹೋರಾಟಗಾರ ವಿಡಿ ಸಾವರ್ಕರ್ (VD Savarkar) ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ವಿರುದ್ಧ ದೂರು ದಾಖಲಾಗಿದ್ದು, ಮತ್ತೆ ವಿವಾದಕ್ಕೆ ಸಿಲುಕಿದ್ದಾರೆ. ರಾಹುಲ್ ಗಾಂಧಿಯವರ ಹೇಳಿಕೆಯಿಂದ ಸ್ಥಳೀಯ ನಾಗರಿಕರ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಬಾಳಾಸಾಹೆಬಂಚಿ ಶಿವಸೇನಾ ನಾಯಕಿ ವಂದನಾ ಡೋಂಗ್ರೆ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಗುರುವಾರ ದೂರು ದಾಖಲಿಸಿದ್ದಾರೆ.

ಮಹಾರಾಷ್ಟ್ರದ ಅಕೋಲಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಸ್ವಾತಂತ್ರ್ಯ ಪೂರ್ವದಲ್ಲಿ ಬ್ರಿಟಿಷರಿಗೆ ಕ್ಷಮೆಯಾಚನೆಯ ಪತ್ರ ಬರೆದು ಸಾವರ್ಕರ್ ಅವರು ಮಹಾತ್ಮ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸರ್ದಾರ್ ಪಟೇಲ್ ಅವರಂತಹ ನಾಯಕರಿಗೆ ದ್ರೋಹ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದರು.

ಮಂಗಳವಾರ ಮುಂಜಾನೆ ರಾಹುಲ್ ಗಾಂಧಿ ಜಂಜಾಟಿಯ ಗೌರವ್ ದಿವಸ್ ಸಂದರ್ಭದಲ್ಲಿ ಹಿಂಗೋಲಿಯಲ್ಲಿ ಭಾರತ್ ಜೋಡೋ ಯಾತ್ರೆಯಲ್ಲಿ ಬುಡಕಟ್ಟು ಸಮಾವೇಶದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾತನಾಡುವಾಗ ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಬ್ರಿಟಿಷರಿಂದ ಪಿಂಚಣಿ ಪಡೆದು ಕಾಂಗ್ರೆಸ್ ವಿರುದ್ಧ ಕೆಲಸ ಮಾಡುತ್ತಿದ್ದರು ಎಂದು ಟೀಕಿಸಿದ್ದರು.

ಅಂಡಮಾನ್ ಜೈಲಿನಲ್ಲಿ ವೀರ್ ಸಾವರ್ಕರ್ ಇದ್ದಾಗ ಬ್ರಿಟಿಷರಿಗೆ ಪತ್ರ ಬರೆದು, ತಮ್ಮನ್ನು ಕ್ಷಮಿಸಿ ಜೈಲಿನಿಂದ ಬಿಡುಗಡೆ ಮಾಡಲು ಹೇಳಿದರು. ವೀರ್ ಸಾವರ್ಕರ್ ಅವರು ಬ್ರಿಟಿಷರಿಂದ ಪಿಂಚಣಿ ಪಡೆದರು. ಅವರು ಕಾಂಗ್ರೆಸ್ ವಿರುದ್ಧ ಕೆಲಸ ಮಾಡಿದರು. ಜೈಲಿನಿಂದ ಹೊರಬಂದ ನಂತರ ಅವರು ಬ್ರಿಟಿಷರ ಪ್ರಸ್ತಾಪವನ್ನು ಒಪ್ಪಿಕೊಂಡು ಅವರ ಕಡೆಗೆ ಸೇರಿದರು. ಸಾವರ್ಕರ್ ಮತ್ತು ಬಿರ್ಸಾ ಮುಂಡಾ ನಡುವಿನ ವ್ಯತ್ಯಾಸವೆಂದರೆ ಬಿರ್ಸಾ ಮುಂಡಾ 24 ವರ್ಷದವರಾಗಿದ್ದಾಗ ಬ್ರಿಟಿಷರ ವಿರುದ್ಧ ಹೋರಾಡಿದರು ಎಂದು ರಾಹುಲ್ ಗಾಂಧಿ ಹೇಳಿದ್ದರು.

TV9 Kannada


Leave a Reply

Your email address will not be published.