ಬೆಂಗಳೂರು: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ದಾವಣಗೆರೆಯ ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಸಮಸ್ಯೆ ಎದುರಾಗಿರೋ​ ಕುರಿತು ಸಿಎಂ ಬಿ.ಎಸ್​ ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ಹೊನ್ನಾಳಿ, ನ್ಯಾಮತಿ ತಾಲೂಕಿನಲ್ಲಿ ಆಸ್ಪತ್ರೆಗಳಿವೆ. ಆದರೆ ವೆಂಟಿಲೇಟರ್ ಸಮಸ್ಯೆಯಿಂದ ಸಂಕಷ್ಟ ಎದುರಾಗಿದೆ. ಕ್ಷೇತ್ರದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಎರಡು ತಾಲೂಕು ಆಸ್ಪತ್ರೆಗೆ ವೆಂಟಿಲೇಟರ್ ನೀಡಿ. 20 ವೆಂಟಿಲೇಟರ್​ಗಳನ್ನ ತುರ್ತಾಗಿ ಒದಗಿಸಿ ಎಂದು ರೇಣುಕಾಚಾರ್ಯ ಮನವಿ ಮಾಡಿದ್ದಾರೆ.

ಪಕ್ಷದ ಶಾಸಕನ ಬೇಡಿಕೆಗೆ ಸ್ಪಂದಿಸಿರೋ ಯಡಿಯೂರಪ್ಪ, ವೆಂಟಿಲೇಟರ್ ಒದಗಿಸುವಂತೆ ಸಂಬಂಧಪಟ್ಟವರಿಗೆ ಸೂಚನೆ ನೀಡಿದ್ದಾರೆ.

The post ವೆಂಟಿಲೇಟರ್ ಸಮಸ್ಯೆ ಬಗ್ಗೆ ಸಿಎಂಗೆ ರೇಣುಕಾಚಾರ್ಯ ಪತ್ರ appeared first on News First Kannada.

Source: newsfirstlive.com

Source link