ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸದ್ಯ ಮೆಡಿಕಲ್ ಆಕ್ಸಿಜನ್ ಸಮಸ್ಯೆ ಇಲ್ಲ. ಮುಂದೆ ಸಮಸ್ಯೆ ಆಗದಂತೆ ಮುನ್ನೆಚ್ಚರಿಕೆ ವಹಿಸಲು ಪ್ರತ್ಯೇಕ ಮೆಡಿಕಲ್ ಆಕ್ಸಿಜನ್ ಘಟಕ ಸ್ಥಾಪಿಸಲಾಗುತ್ತದೆ ಅಂತ ಜಿಲ್ಲಾಧಿಕಾರಿ ಡಾ ರಾಜೇಂದ್ರ ಕೆ.ವಿ ಹೇಳಿದ್ದಾರೆ.

ನಗರದ ಸರ್ಕಾರಿ ವೆನ್ ಲಾಕ್ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್ ಆಕ್ಸಿಜನ್ ಪ್ಲಾಂಟ್​ ಆರಂಭಿಸಲಾಗುತ್ತದೆ. ಎಸ್​​ಡಿಆರ್​ಎಫ್​ ನಿಧಿ ಬಳಸಿ ಆಕ್ಸಿಜನ್ ಘಟಕ ನಿರ್ಮಾಣ ಮಾಡಲಾಗುತ್ತದೆ. ಕೈಗಾರಿಕೆಗಳ ಸಹಯೋಗದೊಂದಿಗೆ ತಾಲೂಕು ಆಸ್ಪತ್ರೆಗಳಲ್ಲೂ ಮಿನಿ ಆಕ್ಸಿಜನ್ ಉತ್ಪಾದನಾ ಘಟಕ ಆರಂಭ ಮಾಡಲಾಗುತ್ತದೆ ಎಂದು ಹೇಳಿದ್ದಾರೆ .

 

The post ವೆನ್​ಲಾಕ್ ಆಸ್ಪತ್ರೆ ಆವರಣದಲ್ಲಿ ಆಕ್ಸಿಜನ್ ಪ್ಲಾಂಟ್​ ನಿರ್ಮಾಣ- ದ. ಕನ್ನಡ ಡಿ.ಸಿ appeared first on News First Kannada.

Source: newsfirstlive.com

Source link