ವೊಡಾಫೋನ್- ಐಡಿಯಾ ಬಳಕೆದಾರರಿಗೆ ಶಾಕ್; ನವೆಂಬರ್ 25ರಿಂದಲೇ ಪ್ರಿಪೇಯ್ಡ್ ಸೇವೆಗಳ ದರ ಹೆಚ್ಚಳ | Vodafone Idea hikes mobile services rates in the range of 20 to 25 per cent from November 25 here is details


ವೊಡಾಫೋನ್- ಐಡಿಯಾ ಬಳಕೆದಾರರಿಗೆ ಶಾಕ್; ನವೆಂಬರ್ 25ರಿಂದಲೇ ಪ್ರಿಪೇಯ್ಡ್ ಸೇವೆಗಳ ದರ ಹೆಚ್ಚಳ

ಪ್ರಾತಿನಿಧಿಕ ಚಿತ್ರ

ದೇಶದ ಪ್ರಮುಖ ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ವೊಡಾಫೋನ್- ಐಡಿಯಾ ತನ್ನ ಸೇವೆಯ ದರಗಳನ್ನು ಹೆಚ್ಚಿಸುವ ಕುರಿತು ಮಾಹಿತಿ ನೀಡಿದೆ. ಪ್ರಿಪೇಯ್ಡ್ ಸೇವೆಗಳಲ್ಲಿನ ಪ್ರಸ್ತುತದ ದರದಲ್ಲಿ ಶೇ.20-25ರಷ್ಟು ಟಾರಿಫ್ ಏರಿಕೆಯಾಗಲಿದೆ ಎಂದು ತಿಳಿಸಲಾಗಿದ್ದು, ಹೊಸ ದರ ನವೆಂಬವರ್ 25ರಿಂದ ಜಾರಿಗೆ ಬರಲಿದೆ. ಕಂಪನಿಯ ಈ ನಿರ್ಧಾರದಿಂದಾಗಿ ಪ್ರತಿ ಬಳಕೆದಾರರಿಂದ ಬರುವ ಸರಾಸರಿ ಆದಾಯ (ARPU)ಹೆಚ್ಚಾಗಲಿದ್ದು, ಪ್ರಸ್ತುತ ಕಂಪನಿ ಎದುರಿಸುತ್ತಿರುವ ಆರ್ಥಿಕ ಸಂಕಷ್ಟ ಸರಿದೂಗಿಸಲು ಸಹಕಾರಿಯಾಗಲಿದೆ ಎಂದು ಸಂಸ್ಥೆ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಸ್ಥಿರ ಬ್ರಾಡ್‌ಬ್ಯಾಂಡ್ ಮತ್ತು ಮೊಬೈಲ್ ನೆಟ್‌ವರ್ಕ್ ಟೆಸ್ಟಿಂಗ್ ಅಪ್ಲಿಕೇಶನ್‌ಗಳ ಕಂಪನಿ ಓಕ್ಲಾ ಪರಿಶೀಲಿಸಿರುವಂತೆ, ಹೊಸ ಸುಂಕದ ಯೋಜನೆಗಳ ಮುಖಾಂತರ ‘ಭಾರತದ ವೇಗದ ಮೊಬೈಲ್ ನೆಟ್‌ವರ್ಕ್ ಅನ್ನು ಮತ್ತಷ್ಟು ಸುಧಾರಿಸಲು ಸಹಾಯವಾಗುತ್ತದೆ’ ಎಂದು ವಿಐ ಸಂಸ್ಥೆ ಹೇಳಿದೆ.

ಪಿಟಿಐ ಹಂಚಿಕೊಂಡ ಟ್ವೀಟ್ ಇಲ್ಲಿದೆ:

ಸರ್ಕಾರದ ಡಿಜಿಟಲ್ ಇಂಡಿಯಾ ಪರಿಕಲ್ಪನೆಯನ್ನು ಸಾಕ್ಷಾತ್ಕಾರಗೊಳಿಸಲು ತನ್ನ ಪಾತ್ರವನ್ನು ನಿರ್ವಹಿಸುವುದಕ್ಕೆ ವೊಡಾಫೋನ್ ಇಂಡಿಯಾ ಬದ್ಧವಾಗಿದೆ. ತನ್ನ ಗ್ರಾಹಕರಿಗೆ ಸರಳ ಮತ್ತು ಅನುಕೂಲಕರ ಉತ್ಪನ್ನಗಳನ್ನು ಒದಗಿಸುವ ಬದ್ಧತೆಗೆ ಅನುಗುಣವಾಗಿ, ಸಂಸ್ಥೆ ಧ್ವನಿ ಮತ್ತು ಡೇಟಾ ಎರಡಕ್ಕೂ ಅತ್ಯುತ್ತಮವಾದ ಯೋಜನೆಗಳನ್ನು ಸಂಗ್ರಹಿಸಿದೆ ನೀಡಲಿದೆ ಎಂದು ವೊಡಾಫೋನ್ ಐಡಿಯಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

VI new price list

ವೊಡಾಫೋನ್ ಐಡಿಯಾ ಹೊಸ ದರಗಳ ಪಟ್ಟಿ

ನವೆಂಬರ್ 22 ರಂದು ಏರ್‌ಟೆಲ್ ಸಂಸ್ಥೆ ಪ್ರಿಪೇಯ್ಡ್ ಬಳಕೆದಾರರಿಗೆ 20-25 ಪ್ರತಿಶತದಷ್ಟು ಸುಂಕವನ್ನು ಹೆಚ್ಚಿಸುವುದಾಗಿ ಘೋಷಿಸಿತ್ತು. ಇದರ ಬೆನ್ನಲ್ಲೇ, ವೊಡಾಫೋನ್ ಐಡಿಯಾ ಕೂಡ ತನ್ನ ನಿರ್ಧಾರ ಪ್ರಕಟಿಸಿದೆ.

TV9 Kannada


Leave a Reply

Your email address will not be published. Required fields are marked *