– ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗಲ್ಲ

ಉಡುಪಿ: ಲಸಿಕೆ ವಿಚಾರದಲ್ಲಿ ಮೋದಿಯನ್ನು ಟೀಕೆ ಮಾಡುವುದು ಸರಿಯಲ್ಲ. ವ್ಯಾಕ್ಸಿನ್ ಬೋಗಸ್ ಎಂದಿರುವ ಡಿ.ಕೆ ಶಿವಕುಮಾರ್‍ ಗೆ ಒಳ್ಳೆದಾಗಲ್ಲ ಎಂದು ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಶಾಪ ಹಾಕಿದ್ದಾರೆ.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಮಧುಸ್ವಾಮಿ, ಮೋದಿ ನೇತೃತ್ವದ ಸರ್ಕಾರ ದೇಶದಲ್ಲಿ 80 ಕೋಟಿ ಜನಕ್ಕೆ ಉಚಿತ ಲಸಿಕೆ ನೀಡಲಾಗುತ್ತಿದೆ. ಕೇಂದ್ರ ಸರ್ಕಾರದ ಈ ನಿರ್ಧಾರಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ. ರಾಜ್ಯ ಸರ್ಕಾರ 2000 ಕೋಟಿ ರೂಪಾಯಿ ತೆಗೆದಿಟ್ಟಿದೆ. ಡಿಕೆಶಿ ಪಾಪದ ಮಾತಿನಿಂದ ಯಾರಿಗೂ ಒಳ್ಳೆಯದಾಗುವುದಿಲ್ಲ. ಟೀಕೆ ಮಾಡುವುದನ್ನು ಮಾಡಿ ಅದು ನಿಮ್ಮ ಡ್ಯೂಟಿ, ವಿರೋಧ ಪಕ್ಷದಲ್ಲಿ ನನಗಿಂತ ಚೆನ್ನಾಗಿ ಕೆಲಸ ಮಾಡಿದವರು ಯಾರು ಇಲ್ಲ ಎಂದರು.  ಇದನ್ನೂ ಓದಿ: ವ್ಯಾಕ್ಸಿನೇಷನ್ ಬಿಗ್ ಫ್ರಾಡ್: ಡಿಕೆಶಿ

ನೈಸರ್ಗಿಕ ಆಪತ್ತಿನ ಕಾಲದಲ್ಲಿ ಎಲ್ಲವನ್ನು ಟೀಕೆ ಮಾಡಬಾರದು. ವ್ಯಾಕ್ಸಿನ್ ಉತ್ಪಾದನೆ ಮಾಡಲು ಕಂಪನಿಯವರಿಗೂ ಕಾಲಾವಕಾಶ ಬೇಕು. ಮುಂದಿನ ಮೂರು ತಿಂಗಳಲ್ಲಿ ರಾಜ್ಯದಲ್ಲಿ ಲಸಿಕೆ ಅಭಿಯಾನ ಮುಗಿಯುತ್ತದೆ. ಟೀಕೆ ಡಿಕೆಶಿ ಅವರ ಬದುಕಿನ ಪ್ರಶ್ನೆ. ಹೀಗಾಗಿ ವಿರೋಧ ಮಾಡುತ್ತಾರೆ ಎಂದು ಕಿಡಿಕಾರಿದರು.

The post ವ್ಯಾಕ್ಸಿನ್ ಬೋಗಸ್ ಅಂದ್ರೆ ನಿಮಗೆ ಒಳ್ಳೆದಾಗಲ್ಲ- ಡಿಕೆಶಿಗೆ ಮಾಧುಸ್ವಾಮಿ ಶಾಪ appeared first on Public TV.

Source: publictv.in

Source link