ವಿಜಯಪುರ: ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು ಆಟೋಗಳನ್ನ ರಸ್ತೆಗೆ ಇಳಿಸೊ ಹಾಗಿಲ್ಲ.‌ ಹಾಗೇ ಈವರೆಗೂ ವ್ಯಾಕ್ಸಿನ್ ಪಡೆಯದ ಬೀದಿಬದಿ ವ್ಯಾಪಾರಸ್ಥರು ವ್ಯಾಪಾರ ಮಾಡೋ ಹಂಗಿಲ್ಲ.. ಹೌದು ವಿಜಯಪುರ ಜಿಲ್ಲಾಧಿಕಾರಿ ಪಿ ಸುನೀಲ್‌ಕುಮಾರ್ ಇಂಥದ್ದೊಂದು ಖಡಕ್ ನಿರ್ಧಾರಕ್ಕೆ ಬಂದಿದ್ದಾರೆ.

ವ್ಯಾಕ್ಸಿನ್ ಹಾಕಿಸಿಕೊಳ್ಳಿ ಅಂತಾ ಎಷ್ಟೇ ಹೇಳಿದ್ರು ಆಟೋ ಚಾಲಕರು, ಬೀದಿ ಬದಿ ವ್ಯಾಪಾರಸ್ಥರು, ಕಟ್ಟಡ ಕಾರ್ಮಿಕರು ಕೇಳ್ತಾನೆ ಇಲ್ಲ. ನಾವು ಆರೋಗ್ಯವಾಗಿದ್ದೀವಿ ವ್ಯಾಕ್ಸಿನ್ ಯಾಕೆ? ಎನ್ತಿದ್ದಾರೆ. ಹೀಗಾಗಿ ಗರಂ ಆಗಿರೋ ಡಿಸಿ ಸುನೀಲ್‌ ಕುಮಾರ್ ಇಂಥಹ ಖಡಕ್ ನಿರ್ಧಾರಕ್ಕೆ ಬಂದಿದ್ದಾರೆ. ವ್ಯಾಕ್ಸಿನ್ ಹಾಕಿಸಿಕೊಂಡರೆ ಮಾತ್ರ ಅಂತವರು ಆಟೋ ಓಡಿಸಬೇಕು, ರಸ್ತೆಬದಿಗಳಲ್ಲಿ ವ್ಯಾಪಾರ ಮಾಡಬಹುದು. ಇಲ್ದೆ ಇದ್ರೆ ಪಾಲಿಕೆ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಲೇಬಾರದು ಎಂದಿದ್ದಾರೆ.

ವಿಜಯಪುರದಲ್ಲಿ 6 ಸಾವಿರಷ್ಟು ಬೀದಿಬದಿ ವ್ಯಾಪಾರಿಗಳು ಇದ್ದಾರೆ. ಆದ್ರೆ ಅರ್ಧದಷ್ಟು ಜನರು ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ. 75 ಸಾವಿರ ಕಟ್ಟಡ ಕಾರ್ಮಿಕರಿದ್ದು ಅವರು ಕೂಡ ವ್ಯಾಕ್ಸಿನ್ ಹಾಕಿಸಿಕೊಂಡಿಲ್ಲ ಅಂತ ತಿಳಿದುಬಂದಿದೆ.

 

The post ವ್ಯಾಕ್ಸಿನ್ ಹಾಕಿಸಿಕೊಳ್ಳದ ಆಟೋ ಚಾಲಕರು, ವ್ಯಾಪಾರಿಗಳಿಗೆ ಶಾಕ್ ನೀಡಿದ ವಿಜಯಪುರ ಡಿಸಿ appeared first on News First Kannada.

Source: newsfirstlive.com

Source link