ಹಿರಿಯ ವೈದ್ಯ ಡಾ. ಬಿ.ಎಂ. ಹೆಗ್ಡೆ ಅವರಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ರಾಷ್ಟ್ರಪತಿ ಭವನದಲ್ಲಿ ಇಂದು ಪದ್ಮವಿಭೂಷಣ ಪುರಸ್ಕಾರ ಪ್ರದಾನ ಮಾಡಿದರು.
ಇಂದು ಮತ್ತು ನೆನ್ನೆ ದೇಶದ ಅತ್ಯುನ್ನತ ಪ್ರಶಸ್ತಿಗಳಾದ ಪದ್ಮ ಪುರಸ್ಕಾರವನ್ನು ನವದೆಹಲಿಯ ರಾಷ್ಟ್ರಪತಿಭವನದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪ್ರದಾನ ಮಾಡಿದರು. ಹಳ್ಳಿಯಿಂದ ದಿಲ್ಲಿಯವರೆಗೆ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಸದ್ದು ಮಾಡುವ ಮೂಲಕ ಸಾಧನೆಗೈದವರನ್ನು ಗುರುತಿಸಿ ಭಾರತ ಸರ್ಕಾರ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದೆ. ಇನ್ನು ಈ ಬಾರಿ 7 ಪದ್ಮವಿಭೂಷಣ. 10 ಪದ್ಮಭೂಷಣ. ಮತ್ತು 102 ಪದ್ಮಶ್ರೀ ಪ್ರಶಸ್ತಿಯನ್ನು ಘೋಷಿಸಲಾಗಿದೆ.
ದೇಶದ ಎರಡನೇ ಅತ್ಯುನ್ನತ ಪ್ರಶಸ್ತಿಗೆ ಭಾಜನರಾದ ಕನ್ನಡಿಗ
ಮಂಗಳೂರು ಮೂಲದ ಖ್ಯಾತ ಹೃದ್ರೋಗ ತಜ್ಞ ಡಾ. ಬೆಳ್ಳೆ ಮೋನಪ್ಪ ಹೆಗ್ಡೆ ವೈದ್ಯಕೀಯ ಕ್ಷೇತ್ರದಲ್ಲಿ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕಾರ ಮಾಡಿದರು.
ಡಾ. ಬಿ.ಎಂ ಹೆಗ್ಡೆ ಎಂದೇ ಖ್ಯಾತರಾಗಿರುವ ಬೆಳ್ಳೆ ಮೋನಪ್ಪ ಹೆಗ್ಡೆಯವರು ಆಗಸ್ಟ್ 18, 1938 ರಂದು ಉಡುಪಿಯ ಬೆಳ್ಳೆ ಗ್ರಾಮದಲ್ಲಿ ಜನಿಸಿದರು. ಹಿರಿಯಡಕದ ಬೊರ್ಡ ಹೈಸ್ಕೂಲ್ ನಲ್ಲಿ ತಮ್ಮ ಪ್ರೌಢ ಶಿಕ್ಷಣವನ್ನು ಮುಗಿಸಿದರು. ಉಡುಪಿಯ ಎಂ ಜಿ ಎಮ್ ಕಾಲೇಜ್ ನಲ್ಲಿ ಇಂಟರಮೀಡಿಯೇಟ್ ಶಿಕ್ಷಣವನ್ನು ಮುಗಿಸಿ ಮದ್ರಾಸ್ ವಿಶ್ವವಿದ್ಯಾನಿಲಯದಿಂದ ಎಂಬಿಬಿಎಸ್ ಪದವಿಯನ್ನು 1960 ರಲ್ಲಿಪಡೆದರು.
ಹೃದ್ರೋಗ ತಜ್ಞರು. ವೈದ್ಯರಾಗಿ, ಅಧ್ಯಾಪಕರಾಗಿ, ಪರೀಕ್ಷಕರಾಗಿ, ಸಂಶೋಧಕರಾಗಿ, ಬರಹಗಾರರಾಗಿ, ಲೇಖಕರಾಗಿ, ಶಿಕ್ಷಣ ತಜ್ಞರಾಗಿ, ಉಪಕುಲಪತಿಗಳಾಗಿ, ವೈದ್ಯಕೀಯ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಡಾ|ಬಿ.ಸಿ.ರಾಯ್ ಪ್ರಶಸ್ತಿಯನ್ನು ೧೯೯೯ರಲ್ಲಿ ಪಡೆದ ಹೆಗ್ಡೆಯವರಿಗೆ ಭಾರತ ಸರ್ಕಾರವು ೨೦೧೦ ರ ಪದ್ಮಭೂಷಣ ಪ್ರಶಸ್ತಿಯನ್ನು ನೀಡಿ ಸನ್ಮಾನಿಸಿದೆ. ಮಣಿಪಾಲ ವಿಶ್ವವಿದ್ಯಾಲಯದ ನಿವೃತ್ತ ಉಪಕುಲಪತಿಗಳಾದ ಹೆಗ್ಡೆಯವರು ಪ್ರಸ್ತುತ ಭಾರತೀಯ ವಿದ್ಯಾಭವನ ಮಂಗಳೂರು ಘಟಕದ ಮುಖ್ಯಸ್ಥರಾಗಿರುವರು.
ಡಾ.ಬಿ.ಎಂ.ಹೆಗ್ಡೆಯವರು ಆಸ್ತಿಕರು. ಭಾರತೀಯ ವಿದ್ಯಾಭವನದೊಡನೆ ನಿಕಟ ಸಂಪರ್ಕ ಹೊಂದಿರುವ ಇವರು ಆಯುರ್ವೇದದ ಸತ್ವವನ್ನು ಮನಗಂಡು ಲಂಡನ್ನಿನ ಥೇಮ್ಸ್ ವ್ಯಾಲಿ ವಿ.ವಿಯ ಆಶ್ರಯದಲ್ಲಿ ಒಂದು ಆಯುರ್ವೇದ ವೈದ್ಯಕೀಯ ಕಾಲೇಜು ಆರಂಭವಾಗಲು ಕಾರಣೀಭೂತರಾದವರು. ಇವರ ವೈದ್ಯಕೀಯ ಕ್ಷೇತ್ರದಲ್ಲಿ ಸಾಧನೆಯನ್ನು ಮನಗಂಡು ಭಾರತ ಸರ್ಕಾರ ಪದ್ಮವಿಭೂಷಣ ಘೋಷಿಸಿದೆ.
President Kovind presents Padma Vibhushan to Dr Belle Monappa Hegde for Medicine. He is a cardiologist, physician-scientist, educationist, motivational speaker, author and teacher. He spread awareness among people regarding issues of health and wellness. pic.twitter.com/9zEBySSoG9
— President of India (@rashtrapatibhvn) November 9, 2021
The post ವ್ಹೀಲ್ಚೇರ್ನಲ್ಲಿ ಬಂದು 2 ನೇ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ಕನ್ನಡಿಗ ಬಿಎಂ ಹೆಗ್ಡೆ appeared first on News First Kannada.