ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ | Kumaraswamy tweets against state government by negligence of karnataka rains


ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ: ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ

ಜೆಡಿಎಸ್ ನಾಯಕ ಎಚ್​.ಡಿ. ಕುಮಾರಸ್ವಾಮಿ

ಬೆಂಗಳೂರು: ರಾಜ್ಯದಲ್ಲಿ ನಿರಂತರ ಮಳೆ ಹಿನ್ನೆಲೆ ಹೆಚ್‌.ಡಿ.ಕುಮಾರಸ್ವಾಮಿ (HD Kumaraswamy) ಸರಣಿ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಜನಸ್ವರಾಜ್‌ ಹೆಸರಿನಲ್ಲಿ ಜಾತ್ರೆ ಮಾಡುವ ಸಮಯವಲ್ಲ. ಶಂಖ ಊದಿಕೊಂಡು ಹೋಗಿ ರೈತರ ಕಣ್ಣೀರನ್ನು ಅಣಕಿಸಬೇಡಿ. ಅಧಿಕಾರ, ರಾಜಕಾರಣದಲ್ಲಿ ಮುಳುಗಿ ಮನುಷ್ಯತ್ವ ಮರೀಬೇಡಿ. ಕೃಷಿ ಕಾಯ್ದೆ ವಾಪಸ್‌ ಪಡೆದೆವು ಎಂದು ಬೀಗಬೇಡಿ. ರೈತರ ತಾಳ್ಮೆಯನ್ನು ಪರೀಕ್ಷಿಸಬೇಡ ಎಂದು ಹೆಚ್‌ಡಿಕೆ ಟ್ವೀಟ್ (Tweet) ಮಾಡಿದ್ದಾರೆ.

ಕೊವಿಡ್‌ ಮಹಾಮಾರಿಯಿಂದ ತತ್ತರಿಸಿದ್ದ ಜನ ಈಗ ಮಳೆಯಿಂದ ಕಷ್ಟಕ್ಕೆ ಸಿಲುಕಿದ್ದಾರೆ. ಮತ್ತೆ ಅವರು ಬದುಕು ಕಟ್ಟಿಕೊಳ್ಳುವ ಮುನ್ನವೇ ಮಳೆ ಸಂಕಷ್ಟಕ್ಕೀಡು ಮಾಡಿದೆ. ಬೆಳೆದ ಬೆಳೆ ಕಣ್ಮುಂದೆಯೇ ಕೊಚ್ಚಿಹೋಗುತ್ತಿದೆ. ನಾಡಿಗೆ ಅನ್ನ ಕೊಡುವ ಅನ್ನದಾತ ಆಪತ್ತಿನಲ್ಲಿದ್ದಾನೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಾಧ್ಯಮಗಳಿಗೆ ಅಧಿಕಾರಿಗಳೇ ನೀಡಿರುವ ಮಾಹಿತಿಯಂತೆ ಜುಲೈ-ನವೆಂಬರ್‌ನಲ್ಲಿ 7.31 ಲಕ್ಷ ಹೆಕ್ಟೇರ್‌ ಅಥವಾ ಅದಕ್ಕಿಂತ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ಮಳೆ ಪಾಲಾಗಿದೆ. ಉತ್ತರ ಕರ್ನಾಟಕ, ಕರಾವಳಿ, ಮಲೆನಾಡು, ಮಧ್ಯ ಕರ್ನಾಟಕ, ಹಳೆ ಮೈಸೂರು, ಬಯಲು ಸೀಮೆ ಸೇರಿ ರಾಜ್ಯದ ಉದ್ದಗಲಕ್ಕೂ ಮಳೆಯ ರುದ್ರನರ್ತನ ಮುಂದುವರಿದೆ ಎಂದು ಹೆಚ್‌.ಡಿ. ಕುಮಾರಸ್ವಾಮಿ ಟ್ವೀಟ್ ಮೂಲಕ ಹೇಳಿದ್ದಾರೆ.

ಸಾವಿರಾರು ಕೋಟಿ ರೂ. ಮೌಲ್ಯದ ಬೆಳೆ ನಾಶವಾಗಿದೆ. ಚಿಕ್ಕಮಗಳೂರು, ಕೊಡಗಿನಲ್ಲಿ ಕಾಫಿ ತೋಟಗಳು ಪೂರ್ಣ ನಾಶವಾಗಿವೆ. ಬಯಲುಸೀಮೆ ಜಿಲ್ಲೆಗಳಲ್ಲಿ ಮಳೆ ಪ್ರಳಯವನ್ನೇ ಸೃಷ್ಟಿಸಿದೆ. ಕೆರೆಕಟ್ಟೆಗಳು ಒಡೆದುಹೋಗಿ ಗ್ರಾಮಗಳಿಗೆ ಸಂಪರ್ಕವೇ ತಪ್ಪಿಹೋಗಿದೆ. ಹಳ್ಳಿಗಳು ನಡುಗಡ್ಡೆಗಳಾಗಿವೆ. ತೋಟಗಳು ಕೆರೆಗಳಾಗಿವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ:
ಕಾಂಗ್ರೆಸ್​ನ ಮಾಜಿ ಮುಖ್ಯಮಂತ್ರಿ ನಮ್ಮ ಶಾಸಕರನ್ನು ಸಂಪರ್ಕಿಸಿದ್ದಾರೆ; ನಮ್ಮ ಶಾಸಕರು ನನಗೆ ಎಲ್ಲಾ ತಿಳಿಸಿದ್ದಾರೆ: ಹೆಚ್​ಡಿ ಕುಮಾರಸ್ವಾಮಿ

ಪ್ರಧಾನಿ ನರೇಂದ್ರ ಮೋದಿ ರೈತರಲ್ಲಿ ನಂಬಿಕೆ ಮೂಡಿಸುವಲ್ಲಿ ವಿಫಲ: ಹೆಚ್​ಡಿ ಕುಮಾರಸ್ವಾಮಿ

TV9 Kannada


Leave a Reply

Your email address will not be published. Required fields are marked *