ಬೆಳಗಾವಿ: ಸಚಿವೆ ಶಶಿಕಲಾ ಜೋಲ್ಲೆ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಬೊಮ್ಮಾಯಿ ಸಂಪುಟದಿಂದ ಅವರನ್ನ ಕೈಬಿಡುವಂತೆ ಒತ್ತಾಯಿಸಿ ಮಾಹಿತಿ ಹಕ್ಕು ಹೋರಾಟಗಾರ ಭೀಮಪ್ಪ ಗಡಾದ ಪತ್ರ ಬರೆದಿದ್ದಾರೆ.
ಸಚಿವರ ವಿರುದ್ಧ ಕೇಳಿಬಂದಿರುವ ಆರೋಪದ ಬಗ್ಗೆ ತನಿಖೆ ನಡೆಯುತ್ತಿದೆ. ಇದೆಲ್ಲ ಪರಿಗಣಿಸಿ ಸಚಿವ ಸ್ಥಾನದಿಂದ ಜೋಲ್ಲೆ ವಜಾ ಮಾಡುವಂತೆ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರ ಕಚೇರಿಯಿಂದ ಪತ್ರವನ್ನು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗೆ ವರ್ಗಾವಣೆ ಮಾಡಿದ್ದಾರೆ.
ಆಡಳಿತ ಸುಧಾರಣಾ ಇಲಾಖೆಯಿಂದ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ್ ಹೆಗಡೆ ಕಾಗೇರಿಗೆ ಪತ್ರ ರವಾನೆಯಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸಭಾಧ್ಯಕ್ಷರಿಗೆ ಪತ್ರ ವರ್ಗಾವಣೆ ಮಾಡಿ ಆದೇಶ ನೀಡಲಾಗಿದೆ ಅನ್ನೋ ಮಾಹಿತಿ ತಿಳಿದುಬಂದಿದೆ.