ದಾವಣಗೆರೆ: ಶಾಮನೂರು ಶಿವಶಂಕರಪ್ಪ ಪುತ್ರ ಗಣೇಶ ಒಡೆತನದ ನಿರ್ಮಾಣ ಹಂತದ ಕಟ್ಟಡ ಕುಸಿದ ಪ್ರಕರಣ ಸಂಬಂಧ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ದಾವಣಗೆರೆ ತಾಲೂಕಿನ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ಘಟನೆ ನಡೆದಿತ್ತು. ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿತವಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದರು. ಇದೀಗ ಗಾಯಗೊಂಡಿದ್ದ ಮತ್ತೊಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ ಅನ್ನೋ ಮಾಹಿತಿ ಲಭ್ಯವಾಗಿದೆ.
ಇನ್ನು ಮೃತ ವ್ಯಕ್ತಿಯನ್ನ ರಾಯಚೂರಿನ, ಬಸಪ್ಪ ಮತ್ತು ಪಶ್ಚಿಮ ಬಂಗಾಳ ಮೂಲದ ಮಜೀದ್ ಅಸುನೀಗಿದ್ದಾರೆ. ಎಥನಾಲ್ ಘಟಕ ಸ್ಥಾಪನೆ ನಿರ್ಮಿಸುತ್ತಿದ್ದ ವೇಳೆ ಕಟ್ಟಡದ ಫಿಲ್ಲರ್ ಕುಸಿದು ಈ ಅವಘಡ ಸಂಭವಿಸಿದೆ.
ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿದ ಪರಿಣಾಮ ದುರ್ಘಟನೆ ಸಂಭವಿಸಿದೆ. ಇನ್ನು ಗಾಯಗೊಂಡಿರುವ ಮೂವರನ್ನ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹದಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ: ನಿರ್ಮಾಣದ ಹಂತದ ಬಿಲ್ಡಿಂಗ್ ಪಿಲ್ಲರ್ ಕುಸಿತ.. ಇಬ್ಬರ ಸಾವು, 6 ಮಂದಿಗೆ ಗಾಯ