ಜಮೀನು ಬಳಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಅಗ್ನಿ ಅವಘಡ
ಹಾವೇರಿ: ಶಾರ್ಟ್ ಸರ್ಕ್ಯೂಟ್ನಿಂದ 50 ಎಕರೆ ಕಬ್ಬು ಬೆಳೆ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹದಿನಾರು ರೈತರಿಗೆ ಸೇರಿದ 50 ಎಕರೆ ಕಬ್ಬು ನಾಶವಾಗಿದೆ. ಜಮೀನು ಬಳಿ ಶಾರ್ಟ್ ಸರ್ಕ್ಯೂಟ್ನಿಂದಾಗಿ(short circuit) ಅಗ್ನಿ ಅವಘಡ ಸಂಭವಿಸಿದ್ದು, 50 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ಕಬ್ಬು(sugarcane) ನಾಶವಾಗಿದೆ. ಸದ್ಯ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ (Fire) ನಂದಿಸಿದ್ದಾರೆ. ತಡಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗದಲ್ಲಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಶ್ರೀನಿವಾಸ್ ಬಂಧನ; ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲು
ಚಿತ್ರದುರ್ಗ: ಗೂಂಡಾ ಕಾಯ್ದೆಯಡಿ ಎಸ್ಡಿಪಿಐ ಜಿಲ್ಲಾಧ್ಯಕ್ಷ ಶ್ರೀನಿವಾಸ್ನನ್ನು ಪೊಲೀಸರು ಬಂಧಿಸಿದ್ದಾರೆ. ಬಾಳೆಕಾಯಿ ಶ್ರೀನಿವಾಸ್ ಅಲಿಯಾಸ್ ಮಚ್ ಸೀನನ್ನು 10 ಪ್ರತ್ಯೇಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪದ ಮೇಲೆ ಚಿತ್ರದುರ್ಗ ಜಿಲ್ಲೆಯ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.