ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ, ಶಾಲೆ ವಿರುದ್ಧ ಪೋಷಕರ ಆಕ್ರೋಶ | School roof collapse and three students injured in vijayapura


ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ, ಶಾಲೆ ವಿರುದ್ಧ ಪೋಷಕರ ಆಕ್ರೋಶ

ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿದು ಮೂವರು ವಿದ್ಯಾರ್ಥಿಗಳಿಗೆ ಗಾಯ, ಶಾಲೆ ವಿರುದ್ಧ ಪೋಷಕರ ಆಕ್ರೋಶ

ವಿಜಯಪುರ: ಶಾಲಾ ಕಟ್ಟಡದ ಮೇಲ್ಚಾವಣಿ ಕುಸಿದು ವಿದ್ಯಾರ್ಥಿಗಳಿಗೆ ಗಾಯಗಳಾಗಿರುವ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ನಂದಿಹಾಳ ಪಿಯು ಗ್ರಾಮದ ಶಾಲೆಯಲ್ಲಿ ನಡೆದಿದೆ. ಶಾಲಾ ಕಟ್ಟಡದ ಮೇಲ್ಛಾವಣಿ ಕುಸಿದು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಗಾಯಗಳಾಗಿವೆ. ಗಾಯಾಳು ಮೂವರು ವಿದ್ಯಾರ್ಥಿಗಳಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ನಂದಿಹಾಳ ಪಿಯು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಟ್ಟಡದ ಮೇಲ್ಛಾವಣಿ ಕುಸಿದಿದೆ. ಅದೃಷ್ಟವಶಾತ್ ಭಾರಿ ಪ್ರಮಾಣದ ಅನಾಹುತ ತಪ್ಪಿದೆ. ಶಾಲೆಯಲ್ಲಿ 200 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಸದ್ಯ ಮೂವರಿಗೆ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸರ್ಕಾರಿ ಶಾಲೆ ಮೇಲ್ಚಾವಣಿ ಕುಸಿದ ಹಿನ್ನೆಲೆ ಮಕ್ಕಳಲ್ಲಿ ಭೀತಿ ಎದುರಾಗಿದೆ. ಸುದ್ದಿ ತಿಳಿದು ಶಾಲೆಗೆ ಆಗಮಿಸಿದ ಪೋಷಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಶಾಲಾ ಕಟ್ಟಡ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ. ಶಾಲೆಯ ಕಟ್ಟಡವನ್ನು ದುರಸ್ಥಿ ಮಾಡಬೇಕೆಂದು ಎರಡು ತಿಂಗಳ ಹಿಂದೆ ಮನವಿ ಮಾಡಿದ್ದರು ಸ್ಪಂದಿಸಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಬರಬೇಕೆಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ.

TV9 Kannada


Leave a Reply

Your email address will not be published. Required fields are marked *