ಶಾಲೆಗಳಿಗೆ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ | Private School Organization demands Separate Coronavirus Covid19 Guidelines for Schools


ಶಾಲೆಗಳಿಗೆ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಮನವಿ

ಸಾಂದರ್ಭಿಕ ಚಿತ್ರ

ಬೆಂಗಳೂರು: ಶಾಲೆಗಳಿಗೆ ಪ್ರತ್ಯೇಕ ಕೊರೊನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರಾಥಮಿಕ & ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ. ನಾಗೇಶ್​ಗೆ ಸೋಮವಾರ ಮನವಿ ಮಾಡಲಾಗಿದೆ. ಶಾಲೆಗಳಲ್ಲಿ ಸರ್ಕಾರದ ಮಾರ್ಗಸೂಚಿ ಪಾಲನೆ ಆಗುತ್ತಿಲ್ಲ. ವಿದ್ಯಾರ್ಥಿಗಳು, ಶಿಕ್ಷಕರು, ಸಿಬ್ಬಂದಿ ಮಾರ್ಗಸೂಚಿ ಪಾಲಿಸ್ತಿಲ್ಲ. ಕೋಚಿಂಗ್ ಸೆಂಟರ್, ಟ್ಯುಟೋರಿಯಲ್​ಗಳು ಪಾಲಿಸುತ್ತಿಲ್ಲ. ಹೀಗಾಗಿ ಶಿಕ್ಷಣ ಸಂಸ್ಥೆಗಳಿಗೆ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ. ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿ ಎಂದು ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್​ ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯದಲ್ಲಿ ಕೊರೊನಾ (Coronavirus) ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಮೂರನೇ ಅಲೆ ಆತಂಕ ಶುರುವಾಗಿದೆ. ತಜ್ಞರು ಹೇಳಿದಂತೆ ಮೂರನೇ ಅಲೆಯಲ್ಲಿ ಮಕ್ಕಳ ಮೇಲೆ ಹೆಚ್ಚು ಪರಿಣಾಮ ಬೀಳುತ್ತಾ ಎಂಬ ಭೀತಿ ಹೆಚ್ಚಾಗಿದೆ. ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾದರೆ ಶಾಲೆ, ಕಾಲೇಜುಗಳನ್ನು ಬಂದ್ ಮಾಡಲು ಸರ್ಕಾರ ಕೂಡಾ ಸಿದ್ಧವಾಗಿದೆ. ಈಗಾಗಲೇ ಮಕ್ಕಳ ಬಗ್ಗೆ ಮುಂಜಾಗ್ರತ ಕ್ರಮಗಳನ್ನ ಕೈಗೊಳ್ಳಲಾಗಿದ್ದು, ತೀವ್ರ ನಿಗಾವಹಿಸಲಾಗಿದೆ. ಹೀಗಿದ್ದು, ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಸೋಂಕು ತಗುಲುತ್ತಿದೆ.

ಡಿಸೆಂಬರ್ 25 ರಿಂದ ನವೆಂಬರ್ 05 ರವರೆಗೆ ರಾಜ್ಯದ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು ಜನರಿಗೆ ಕೊರೊನಾ ಸೋಂಕು ತಗುಲಿದೆ ಅಂತ ಇಲ್ಲಿ ತಿಳಿಸಲಾಗಿದೆ. ಮೈಸೂರಿನಲ್ಲಿ ನಿನ್ನೆವರೆಗೆ 291 ಜನರಿಗೆ ಕೊರೊನಾ ಸೋಂಕು ತಗುಲಿದೆ. ಎರಡು ಖಾಸಗಿ ನರ್ಸಿಂಗ್ ಕಾಲೇಜಿನ 72 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ. ಕೊಡಗಿನಲ್ಲಿ ಕಳೆದ 10 ದಿನಗಳಲ್ಲಿ 54 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಮಡಿಕೇರಿ ನಗರದ ಕೊಡಗು ವಿದ್ಯಾಲಯ ಶಾಲೆಯ 9 ಮಕ್ಕಳಿಗೆ ಪಾಸಿಟಿವ್ ಇದೆ.

ಹಾವೇರಿಯಲ್ಲಿ ಹತ್ತು ದಿನಗಳಲ್ಲಿ ಒಟ್ಟು ಒಂಬತ್ತು ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಆದರೆ ಯಾವುದೇ ಶಾಲಾ ಕಾಲೇಜುಗಳಲ್ಲಿ ಪಾಸಿಟಿವ್ ಕೇಸ್​ಗಳು ಕಾಣಿಸಿಕೊಂಡಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 159 ಪಾಸಿಟಿವ್ ಕೇಸ್​ಗಳಿವೆ. 21 ಜನ ವಿದ್ಯಾರ್ಥಿಗಳಿಗೆ ಕೊರೊನಾ ಇರುವುದು ದೃಢಪಟ್ಟಿದೆ. ಒಂದೇ ಕಾಲೇಜಿನ 15 ಜನ ವಿದ್ಯಾರ್ಥಿಗಳಿಗೆ ಸೋಂಕು ಕಾಣಿಸಿಕೊಂಡಿದೆ.

TV9 Kannada


Leave a Reply

Your email address will not be published. Required fields are marked *