ಪ್ರಾತಿನಿಧಿಕ ಚಿತ್ರ
ಕಲಬುರಗಿ: ರಾಜ್ಯದಲ್ಲಿ ಕೊರೊನಾ ಕಣ್ಣು ಹೆಚ್ಚಾಗಿ ವಿದ್ಯಾರ್ಥಿಗಳ ಮೇಲೆ ಬಿದ್ದಿದೆ. ಕಲಬುರಗಿಯ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸೋಂಕಿತರ ಸಂಖ್ಯೆ 34 ಕ್ಕೆ ಏರಿಕೆಯಾಗಿದೆ. ಮೊದಲು 18 ಇತ್ತು. ಇದೀಗ ಮತ್ತೆ 16 ವಿದ್ಯಾರ್ಥಿಗಳಿಗೆ ಕೊರೊನಾ ದೃಢಪಟ್ಟಿದೆ. ವಿವಿಯ ಎರಡೂ ಹಾಸ್ಟೆಲ್ಗಳು ಈಗ ಕಂಟೈನ್ಮೆಂಟ್ ಝೋನ್ಗಳಾಗಿ ಪರಿವರ್ತಿಸಲಾಗಿದೆ. ಜಿಲ್ಲೆಯ ವಿವಿಧ ಶಾಲೆಯ 11 ಮಕ್ಕಳಿಗೂ ಕೊವಿಡ್ ಪಾಸಿಟಿವ್ ವರದಿ ಬಂದಿದೆ.
ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟ
ಬೆಳಗಾವಿ ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆಯಲ್ಲಿ ಕೊರೊನಾ ಸ್ಫೋಟಗೊಂಡಿದೆ. 35 ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು ಪೋಷಕರ ಒತ್ತಾಯ ಮೇರೆಗೆ ಪತ್ರ ಬರೆಸಿಕೊಂಡು 35 ಸೋಂಕಿತ ವಿದ್ಯಾರ್ಥಿನಿಯರನ್ನು ಪೋಷಕರ ಜೊತೆ ಕಳಿಸಿಕೊಡಲಾಗಿದೆ. 7 ನೇ ತರಗತಿಯಿಂದ 12ನೇ ತರಗತಿವರೆಗೆ ಒಟ್ಟು 723 ವಿದ್ಯಾರ್ಥಿಗಳಿದ್ರು. 9ನೇ ತರಗತಿವರೆಗೆ ರಜೆ ಹಿನ್ನೆಲೆ 431 ವಿದ್ಯಾರ್ಥಿಗಳು ಮನೆಗೆ ತೆರಳಿದ್ದಾರೆ. ವಸತಿ ಶಾಲೆಯ ಒಟ್ಟು 136 ಜನರಿಗೆ ಕೊವಿಡ್ ಸೋಂಕು ತಗುಲಿದೆ. 77 ವಿದ್ಯಾರ್ಥಿಗಳು, 12 ಬೋಧಕ, 12 ಬೋಧಕೇತರ ಸಿಬ್ಬಂದಿಗೆ ಕೊವಿಡ್ ದೃಢಪಟ್ಟಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಹಶೀಲ್ದಾರ್ ಸೋಮಲಿಂಗಪ್ಪ ಹಲಗಿ ತಿಳಿಸಿದ್ದಾರೆ.