ಶಾಸಕನನ್ನ ಕೊಲೆ ನಾಡೀ ಸಂಚು ಪ್ರಜಾಪ್ರಭುತ್ವಕ್ಕೆ ಅಪಾಯಕಾರಿ-ಆರಗ ಜ್ಞಾನೇಂದ್ರ


ಶಿವಮೊಗ್ಗ: ಬಿಜೆಪಿ ಶಾಸಕ ವಿಶ್ವನಾಥ್ ಕೊಲೆ ಸಂಚು ಆರೋಪಕ್ಕೆ ಸಂಬಂಧಿಸಿ ಈ ಬೆಳವಣಿಗೆ ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಪಾಯಕಾರಿ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕೇಸ್​ಗೆ ಸಂಬಂಧಿಸಿ ಈಗಾಗಲೇ ಪ್ರಕರಣ ದಾಖಲಾಗಿದೆ. ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಶಾಸಕರಿಗೆ ಭದ್ರತೆ ಒದಗಿಸಲಾಗಿದೆ ಜೊತೆಗೆ ಈ ಕುರಿತು ಸಿಎಂ‌ ಜೊತೆ ಚರ್ಚಿಸಿದ್ದೇನೆ. ಪೊಲೀಸರಿಗೆ ಸಂಚಿನ ಸಂಬಂಧ ಅಗತ್ಯ ದಾಖಲೆ ಲಭ್ಯವಾಗಿದೆ ಎಂದಿದ್ದಾರೆ.

ಇದನ್ನೂ ಓದಿ:S.R.ವಿಶ್ವನಾಥ್ ಹತ್ಯೆಗೆ ಸ್ಕೆಚ್: ಗೃಹ ಸಚಿವ ಆರಗ ಜ್ಞಾನೇಂದ್ರ ನೀಡಿದ ಮಾಹಿತಿ ಏನು?

News First Live Kannada


Leave a Reply

Your email address will not be published. Required fields are marked *