ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಆಗುತ್ತಾರೆ ಎಂದು ಪದೇ ಪದೇ ಹೇಳಿಕೆ ನೀಡುತ್ತಿದ್ದ ಜಮೀರ್ ಅಹಮ್ಮದ್ ಖಾನ್ ಗೆ ಬಹಿರಂಗ ಹೇಳಿಕೆ ನೀಡದಂತೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಎಚ್ಚರಿಸಿದ್ದಾರೆ ಎಂದು ತಿಳಿದು ಬಂದಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ಶಾಸಕ ಜಮೀರ್ ಅಹಮ್ಮದ್ ಖಾನ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲ ಕರೆ ಮಾಡಿದ್ದಾರೆ. ಇಂದು ಬೆಳಗ್ಗೆ ಕರೆ ಮಾಡಿ ಮಾತನಾಡಿದ ಸುರ್ಜೆವಾಲಾ, ಪಕ್ಷದ ಶಿಸ್ತು ಮೀರದಂತೆ ಎಚ್ಚರಿಕೆ ನೀಡಿದ್ದಾರೆ. ಬಹಿರಂಗ ಹೇಳಿಕೆ ಕೊಡದಂತೆ ಜಮೀರ್ ಅಹಮ್ಮದ್ ಖಾನ್ ಗೆ ಸೂಚನೆ ನೀಡಿದ್ದಾರೆ. ಪಕ್ಷದಲ್ಲಿ ಶಿಸ್ತು ಮುಖ್ಯ, ಯಾವ ಕಾರಣಕ್ಕೂ ಬಹಿರಂಗ ಹೇಳಿಕೆ ಕೊಡದಂತೆ ವಾರ್ನಿಂಗ್ ನೀಡಿದ್ದಾರೆ ಎನ್ನಲಾಗಿದೆ.

ಡಿಕೆ ಶಿವಕುಮಾರ್ ಎಚ್ಚರಿಕೆಗೂ ಬಗ್ಗದೆ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎಂದು ಜಮೀರ್ ಅಹಮ್ಮದ್ ಖಾನ್ ಪದೇ ಪದೇ ಹೇಳಿಕೆ ಕೊಡುತ್ತಿದ್ದರು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲರಿಂದಲೆ ಜಮೀರ್ ಗೆ ಎಚ್ಚರಿಕೆ ರವಾನಿಸುವ ಮೂಲಕ ಜಮೀರ್ ಅಹಮ್ಮದ್ ಖಾನ್ ಹೇಳಿಕೆಗೆ ಬ್ರೇಕ್ ಹಾಕುವ ಪ್ರಯತ್ನಕ್ಕೆ ಮುಂದಾಗಿದ್ದಾರೆ.

The post ಶಾಸಕ ಜಮೀರ್​​​ಗೆ AICC ವಾರ್ನಿಂಗ್ appeared first on Public TV.

Source: publictv.in

Source link