ಹಾಸನ: ಶಿಕಾರಿಗೆ ತೆರಳಿದ್ದ ವೇಳೆ ಗೆಳೆಯರ ನಡುವೆ ಗಲಾಟೆಯಾಗಿ, ಸ್ನೇಹಿತನಿಗೆ ಮತ್ತೊಬ್ಬ ಸ್ನೇಹಿತ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಹಾಸನ ಜಿಲ್ಲೆ, ಬೇಲೂರು ತಾಲ್ಲೂಕಿನ ಹಾರೋಹಳ್ಳಿ ಬಳಿಯ ಅರಣ್ಯದಲ್ಲಿ ನಡೆದಿದೆ.

ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ರವಿ, ಶಾಂತಕುಮಾರ್ ಹಾಗೂ ಸ್ನೇಹಿತರು ಶಿಕಾರಿಗೆ ತೆರಳಿದ್ದರು. ಈ ವೇಳೆ ಕ್ಷುಲ್ಲಕ ಕಾರಣಕ್ಕೆ ಗೆಳೆಯರ ನಡುವೆ ಕಿತ್ತಾಟ ಶುರುವಾಗಿದೆ. ಇದ್ರಿಂದ ಕೆರಳಿದ ರವಿ ತನ್ನ ಬಳಿ ಇದ್ದ ನಾಡ ಬಂದೂಕಿನಿಂದ ಸ್ನೇಹಿತ ಶಾಂತಕುಮಾರ್ ಕಾಲಿಗೆ ಗುಂಡು ಹೊಡೆದಿದ್ದಾನೆ. ಗುಂಡಿತ ಹೊಡೆತ ತಿಂದು ಗಾಯಗೊಂಡ ಶಾಂತಕುಮಾರ್‍ಗೆ ಬೇಲೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗೆ ಹಾಸನದ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಘಟನೆ ನಂತರ ಆರೋಪಿ ರವಿ ಪರಾರಿಯಾಗಿದ್ದಾನೆ. ಆಸ್ಪತ್ರೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಭೇಟಿ ನೀಡಿ ಮಾಹಿತಿ ಕಲೆಹಾಕಿದ್ದಾರೆ. ಘಟನೆ ಸಂಬಂಧ ಬೇಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

The post ಶಿಕಾರಿಗೆ ತೆರಳಿದ್ದ ಗೆಳೆಯರ ನಡುವೆ ಗಲಾಟೆ- ಕಾಲಿಗೆ ಗುಂಡು ಹೊಡೆದ ಸ್ನೇಹಿತ appeared first on Public TV.

Source: publictv.in

Source link