ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ | Karnataka Education Ministry permits Teachers Transfer Karnataka Govt Employment

ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ

ಪ್ರಾತಿನಿಧಿಕ ಚಿತ್ರ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಲು ಶಿಕ್ಷಕರಿಂದ ಬೇಡಿಕೆ ಹಿನ್ನೆಲೆ ಶಿಕ್ಷಣ ಇಲಾಖೆಯಿಂದ ಅನುಮತಿ ನೀಡಲಾಗಿದೆ. ಶೇಕಡಾವಾರು ಮಿತಿ ಲೆಕ್ಕಾಚಾರ ಮೇಲೆ ಶಿಕ್ಷಕರ ವರ್ಗಾವಣೆಗೆ ಅನುಮತಿ ನೀಡಲಾಗಿದೆ. ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ‌ ಸಂಖ್ಯೆಯ ಆಧಾರದ ಮೇಲೆ ಶೇಕಡಾವಾರು ಮಿತಿಯಂತೆ ಈ ನಿರ್ಧಾರ ತಿಳಿಸಲಾಗಿದೆ.

ಶಿಕ್ಷಕರನ್ನು ನೇಮಕಾತಿ ಮಾಡಿದ್ದು ಮಕ್ಕಳಿಗೆ ಪಾಠ ಮಾಡಲು, ಸಂಸಾರ ನೋಡಿಕೊಳ್ಳಲು ಅಲ್ಲ: ಬಿಸಿ ನಾಗೇಶ್
ಕಳೆದ 3 ವರ್ಷದಿಂದ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಿಂತಿತ್ತು. 2 ದಿನದಿಂದ ವರ್ಗಾವಣೆ ಪ್ರಕ್ರಿಯೆ ಮತ್ತೆ ಶುರುವಾಗಿದೆ. ರಾಜ್ಯದ ಎಲ್ಲಾ ಶಿಕ್ಷಕರು ಸಂತಸ ವ್ಯಕ್ತಪಡಿಸಿದ್ದಾರೆ. ಆದರೆ ಕೆಲ ವೈಯಕ್ತಿಕ ಸಮಸ್ಯೆಯನ್ನು ಸಾಮೂಹಿಕ ಸಮಸ್ಯೆ ಎಂದು ಬಿಂಬಿಸಲಾಗದು. ಶಿಕ್ಷಕ ವೃತ್ತಿಗೆ ಸೇರುವಾಗ ಜಿಲ್ಲಾವಾರು ಆಯ್ಕೆ ಗೊತ್ತಿರಲಿಲ್ಲವೆ? ನಾವು ಶಿಕ್ಷಕರನ್ನು ನೇಮಕ ಮಾಡಿರುವುದು ಪಾಠ ಮಾಡಲಿಕ್ಕೆ. ಸಂಸಾರ ನೋಡಿಕೊಳ್ಳುವುದಕ್ಕಲ್ಲ ಎಂದು ಬಿ.ಸಿ.ನಾಗೇಶ್ ಈ ಹಿಂದೆ ಖಾರವಾಗಿ ನುಡಿದಿದ್ದರು. ದಾವಣಗೆರೆ ಜಿಲ್ಲೆ ಬೆಳಲಗೆರೆ ಗ್ರಾಮದಲ್ಲಿ ಅವರು ಮಾತನಾಡಿದ್ದರು.

ಶಿಕ್ಷಕರ ಸಮಸ್ಯೆಗಿಂತ ವಿದ್ಯಾರ್ಥಿಗಳ ಸಮಸ್ಯೆ ಬಗೆಹರಿಸಬೇಕು. ನಂತರ ಜಿಲ್ಲಾವಾರು ಶಿಕ್ಷಕರ ಸಮಸ್ಯೆ ಬಗೆಹರಿಸುತ್ತೇವೆ. ಸದ್ಯದಲ್ಲೇ 5 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತೇವೆ ಎಂದು ನಾಗೇಶ್ ಹೇಳಿದ್ದರು. ಶಿಕ್ಷಣ ಸಚಿವರ ವರ್ಗಾವಣೆಯ ಕುರಿತ ಹೇಳಿಕೆ ವಿವಾದಕ್ಕೆ ಕಾರಣವಾಗಿತ್ತು.

ಶಿಕ್ಷಣ ಸಚಿವರು ಹೊಸ ಶಿಕ್ಷಣ ನೀತಿಯ ಬಗ್ಗೆಯೂ ಮಾತನಾಡಿದ್ದರು. ಹೊಸ ಶಿಕ್ಷಣ ನೀತಿಯ ಬಗ್ಗೆ ಇಲ್ಲ ಸಲ್ಲದ ಆರೋಪ ಬೇಡ. ಶಿಕ್ಷಣ ನೀತಿ ಬಗ್ಗೆ ಓದಿಕೊಂಡು ಬನ್ನಿ ಚರ್ಚೆ ಮಾಡೋಣ. ಹಿಂದಿ ಭಾಷೆಗೂ ಎನ್​ಇಪಿಗೂ ಯಾವುದೇ ಸಂಬಂಧ ಇಲ್ಲ. ಒಂದು ವರ್ಗವನ್ನ ದೂರ ಇಡಲಾಗುತ್ತದೆ ಅನ್ನೋದು ಸುಳ್ಳು. ಮಾತೃ ಭಾಷೆಗೆ ಆದ್ಯತೆ ಹೊಸ ಶಿಕ್ಷಣ ನೀತಿಯಲ್ಲಿದೆ ಎಂದು ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ ನೇತೃತ್ವದಲ್ಲಿ ಹೊಸ ಶಿಕ್ಷಣ ನೀತಿ ಮಾಡಲಾಗಿದೆ. ಅವರು ರಾಜೀವ್ ಗಾಂಧಿ ಹಾಗೂ ಮನಮೋಹನ್ ಸಿಂಗ್ ಅವರಿಗೂ ಸಲಹೆ ಗಾರರಾಗಿದ್ದರು. ಅನಗತ್ಯವಾಗಿ ಆರೋಪ ಸರಿಯಲ್ಲ ಎಂದು ನಾಗೇಶ್ ಹೇಳಿದ್ದರು.

ಇದನ್ನೂ ಓದಿ: ವರ್ಗಾವಣೆಗೆ ಲಂಚ ಕೊಡ್ತೀರಾ: ಶಿಕ್ಷಕರಿಗೆ ಪ್ರಶ್ನೆ ಕೇಳಿ ಪೇಚಿಗೆ ಸಿಲುಕಿದ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್

ಇದನ್ನೂ ಓದಿ: ಮೈಸೂರಿನ ಸರ್ಕಾರಿ ಶಿಕ್ಷಕರಿಗೆ ವಸ್ತ್ರ ಸಂಹಿತೆ ಜಾರಿ: ಶಿಕ್ಷಕರು ಜೀನ್ಸ್ ಪ್ಯಾಂಟ್, ಟಿ ಶರ್ಟ್ ಧರಿಸದಂತೆ ಆದೇಶ

TV9 Kannada

Leave a comment

Your email address will not be published. Required fields are marked *