ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದ ಆರೋಪಿಗಳ ಬಂಧನಕ್ಕೆ ನಾಲ್ಕು ತಂಡಗಳನ್ನ ರಚಿಸಲಾಗಿದೆ. ನಾಲ್ಕು ತಂಡಗಳನ್ನ ರಚಿಸಿರುವ ಶಿವಮೊಗ್ಗ ಜಿಲ್ಲಾ ಪೊಲೀಸರು, ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ಇನ್ಸ್ಪೆಪೆಕ್ಟರ್, ವಿನೋಬನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್, ಕೋಟೆ ಠಾಣೆ ಇನ್ಸ್ಪೆಕ್ಟರ್ ಹಾಗೂ ಜಯನಗರ ಠಾಣೆ ಇನ್ಸ್ಪೆಕ್ಟರ್ ನೇತೃತ್ವದ 4 ತಂಡಗಳನ್ನ ರಚನೆ ಮಾಡಲಾಗಿದೆ.
ಆರೋಪಿಗಳ ಪತ್ತೆಗೆ ವಿವಿಧ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದಾರೆ. ವರದಿಗಳ ಪ್ರಕಾರ, ಬೆಂಗಳೂರಲ್ಲಿ ಮೂವರನ್ನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗದಲ್ಲಿ ಒಬ್ಬರನ್ನ ವಶಕ್ಕೆ ಪಡೆಯಲಾಗಿದೆ ಅನ್ನೋ ಮಾಹಿತಿ ಲಭ್ಯವಾಗಿದೆ.