ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ: ನಾಲ್ವರಿಗೆ ಗಾಯ – Shivamogga clash between two community youths: four injured


ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ ಗಾಂಧಿ ವೃತ್ತದಲ್ಲಿ ನಡೆದಿದೆ.

ಶಿವಮೊಗ್ಗ: ಕ್ಷುಲ್ಲಕ ಕಾರಣಕ್ಕೆ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿರುವ ಘಟನೆ ಭದ್ರಾವತಿಯ  (Bhadravati) ಗಾಂಧಿ ವೃತ್ತದಲ್ಲಿ ನಡೆದಿದೆ. ಗಲಾಟೆಯಲ್ಲಿ ಅರವಿಂದ್ ಮತ್ತು ಗೌತಮ್ ಎಂಬುವವರಿಗೆ ಗಾಯವಾಗಿದೆ. ಇಬ್ಬರನ್ನು ಭದ್ರವತಿ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೆ ಆಸ್ಪತ್ರೆ ಬಳಿಯೂ ಎರಡು ಕೋಮಿನ ಯುವಕರ ನಡುವೆ ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ರಿಜ್ವಾನ್‌ ಎಂಬುವರಿಗೆ ಚಾಕು ಇರಿಯಲಾಗಿದ್ದು, ಹರೀಶ್ ಎಂಬುವವರಿಗೆ ಗಾಯವಾಗಿದೆ. ಚಾಕು ಇರಿತಕ್ಕೊಳಗಾದ ರಿಜ್ವಾನ್‌ ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭದ್ರಾವತಿ ಹಳೇ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಘಟನಾ ಸ್ಥಳಕ್ಕೆ ಭದ್ರಾವತಿ ಹಳೇ ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಪೊಲೀಸರು ಸ್ಥಳದಲ್ಲಿ ಜಮಾಯಿಸಿದ್ದ ಗುಂಪುಗಳನ್ನು ಚದುರಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ

TV9 Kannada


Leave a Reply

Your email address will not be published.