ಶಿವಮೊಗ್ಗ: ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ವಾರದಲ್ಲಿ 4 ದಿನಗಳ ಕಾಲ ಲಾಕ್‍ಡೌನ್ ಮಾಡಲು ನಿರ್ಧರಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಶಿವಮೊಗ್ಗದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾತನಾಡಿದ ಸಚಿವರು ಗುರುವಾರ, ಶುಕ್ರವಾರ, ಶನಿವಾರ ಹಾಗೂ ಭಾನುವಾರ ದಿನದಂದು ಸಂಪೂರ್ಣ ಲಾಕ್ ಡೌನ್ ಆಗಲಿದ್ದು, ಉಳಿದ ಮೂರು ದಿನಗಳು ಜನತಾ ಕಪ್ರ್ಯೂ ಮುಂದುವರಿಯಲಿದೆ. ಜೊತೆಗೆ ಈ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ನಿಯಮ ಕೇವಲ ಶಿವಮೊಗ್ಗ ನಗರಕ್ಕಷ್ಟೇ ಸೀಮಿತವಾಗಿದ್ದು, ಇನ್ನುಳಿದಂತೆ ಜಿಲ್ಲೆಯಲ್ಲಿ ರಾಜ್ಯ ಸರಕಾರ ಜಾರಿಗೊಳಿಸಿರುವ ಲಾಕ್‍ಡೌನ್ ನಿಯಮ ಮುಂದುವರಿಯಲಿದೆ ಎಂದರು.

ಶಿವಮೊಗ್ಗ ನಗರದಲ್ಲಿ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ ಅವಧಿಯಲ್ಲಿ ಕೇವಲ ಮೆಡಿಕಲ್ ಶಾಪ್ ಬಿಟ್ಟು, ಇನ್ನುಳಿದಂತೆ ಅಗತ್ಯ ವಸ್ತುಗಳ ಖರೀದಿ ಹಾಗೂ ಮಾರಾಟ ಸಹ ಇರುವುದಿಲ್ಲ. ಈ ವೇಳೆ ಜನರು ಮನೆಯಿಂದ ಹೊರಗೆ ಬರದಂತೆ ಸಚಿವ ಈಶ್ವರಪ್ಪ ತಿಳಿಸಿದರು.

The post ಶಿವಮೊಗ್ಗ 4 ದಿನಗಳ ಕಾಲ ಸಂಪೂರ್ಣ ಲಾಕ್‍ಡೌನ್ appeared first on Public TV.

Source: publictv.in

Source link