ಸ್ಯಾಂಡಲ್ವುಡ್ಗೆ ಮತ್ತೊಂದು ಆಘಾತ ಆಗಿದೆ. ಹಿರಿಯ ನಟ ಶಿವರಾಮ್ ಇನ್ನು ನೆನಪು ಮಾತ್ರ. ತಲೆಗೆ ತೀವ್ರವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ನಟ ಶಿವರಾಮ್ (84) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಇನ್ನು ಹಿರಿಯ ನಟನ ಅಗಲಿಕೆಗೆ ಗಣ್ಯಾತಿಗಣ್ಯರು ಸಂತಾಪ ಸೂಚಿಸಿ ಕಂಬನಿ ಮಿಡಿಯುತ್ತಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಶಿವರಾಂ ನಿಧನಕ್ಕೆ ಟ್ವೀಟ್ ಮಾಡಿ ಕಂಬನಿ ಮಿಡಿದಿದ್ದಾರೆ. ಟ್ವೀಟ್ ಮಾಡಿ ಅಗಲಿದ ಹಿರಿಯ ನಟನಿಗೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಂ ಅವರ ನಿಧನದಿಂದ ದುಃಖಿತನಾಗಿದ್ದೇನೆ. ದಶಕಗಳ ಕಾಲ ತಮ್ಮ ಅಮೋಘ ನಟನೆಯ ಮೂಲಕ ಕಲಾಸೇವೆಗೈದ ಶಿವರಾಂ ಅವರ ನೆನಪು ನಮ್ಮೊಂದಿಗೆ ಸದಾ ಜೀವಂತವಾಗಿರಲಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲಿ, ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿ ಕುಟುಂಬ ವರ್ಗಕ್ಕೆ ಮತ್ತು ಅಭಿಮಾನಿಗಳಿಗೆ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.