ಶಿವರಾಂ ನಿಧನ, ಕರುನಾಡು ಹಿರಿಯ ಕಲಾವಿದನನ್ನ ಕಳೆದುಕೊಂಡಿದೆ -ಬಿಎಸ್​ವೈ ಸಂತಾಪ


ಸ್ಯಾಂಡಲ್​ವುಡ್ ಹಿರಿಯ ನಟ ಶಿವರಾಂ ಅಗಲಿಕೆಗೆ ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ. ಶಿವರಾಂ ಅವರ ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ ಎಂದು ಬಿಎಸ್​ ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಶಿವರಾಂ ಅವರ ನಿಧನರಾದ ಸುದ್ದಿ ಅತೀವ ನೋವನ್ನುಂಟು ಮಾಡಿದೆ. ಕನ್ನಡದ ದಿಗ್ಗಜ ಕಲಾವಿದರೊಂದಿಗೆ ನಟಿಸಿ ಸೈ ಎನಿಸಿಕೊಂಡಿದ್ದ ಅವರು, ನಿರ್ದೇಶಕ, ನಿರ್ಮಾಪಕರಾಗಿಯೂ ಕೆಲಸ ಮಾಡಿದ್ದರು. ಕಿರುತೆರೆಯ ಹಲವು ಧಾರಾವಾಹಿಗಳಲ್ಲಿಯೂ ಅಭಿನಯಿಸಿದ್ದರು.

ಅವರ ನಿಧನದಿಂದ ನಾಡು ಹಿರಿಯ ಕಲಾವಿದರನ್ನು ಕಳೆದುಕೊಂಡಂತಾಗಿದೆ. ಅನೇಕ ಸಂದರ್ಭಗಳಲ್ಲಿ ಅವರನ್ನು ಭೇಟಿ ಮಾಡಿದ್ದು, ಅವರು ಇಂದು ನಮ್ಮೊಂದಿಗೆ ಇಲ್ಲ ಎನ್ನುವುದು ಅತೀವ ನೋವನ್ನು ತಂದಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಕುಟುಂಬ, ಅಭಿಮಾನಿಗಳಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಕೋರುತ್ತೇನೆ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

News First Live Kannada


Leave a Reply

Your email address will not be published. Required fields are marked *