ಶಿವರಾಜ್​ಕುಮಾರ್​ ವಿಶೇಷ ಮನವಿ; ಇದನ್ನು ಅಭಿಮಾನಿಗಳು ನಡೆಸಿಕೊಡ್ತಾರಾ?


Shiva rajakumar

ಪುನೀತ್​ ರಾಜ್​ಕುಮಾರ್​ ನಿಧನ ಹೊಂದಿದ್ದಾರೆ ಎನ್ನುವ ವಿಚಾರವನ್ನು ಇನ್ನೂ ಯಾರಿಂದಲೂ ಅರಗಿಸಿಕೊಳ್ಳೋಕೆ ಆಗುತ್ತಿಲ್ಲ. ಈ ಕಾರಣಕ್ಕೆ ಸಾಕಷ್ಟು ಮಂದಿ ಈಗಲೂ ಕಣ್ಣೀರು ಹಾಕುತ್ತಿದ್ದಾರೆ. ಕೆಲವರು ಆತ್ಮಹತ್ಯೆ ಮಾಡಿಕೊಂಡ ಬಗ್ಗೆಯೂ ವರದಿ ಆಗಿದೆ. ಇದು ಶಿವರಾಜ್​ಕುಮಾರ್​ ಅವರಿಗೆ ಸಾಕಷ್ಟು ನೋವು ತಂದಿದೆ. ಈ ರೀತಿ ಮಾಡಿಕೊಳ್ಳದಂತೆ ಶಿವರಾಜ್​ಕುಮಾರ್​ ಅವರು ಮನವಿ ಮಾಡಿಕೊಳ್ಳುತ್ತಲೇ ಇದ್ದಾರೆ. ಇಂದು (ಡಿಸೆಂಬರ್​ 5) ಶಿವರಾಜ್​ಕುಮಾರ್​ ಈ ಬಗ್ಗೆ ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರದ ಕರ್ನಾಟಕ ಪ್ರದೇಶ ಆರ್ಯ ಈಡಿಗರ ಸಂಘದಲ್ಲಿ ಇಂದು ಪುನೀತ್​ ಸ್ಮರಣಾಂಜಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ವೇಳೆ ಅಪ್ಪು ನೆನಪುಗಳನ್ನು ಮೆಲುಕು ಹಾಕಿದ ಶಿವರಾಜ್​ಕುಮಾರ್​ ಅವರು ಬಿಕ್ಕಿ ಬಿಕ್ಕಿ ಅತ್ತರು. ಅಲ್ಲದೆ, ಯಾರೂ ಆತ್ಮಹತ್ಯೆ ಮಾಡಿಕೊಳ್ಳದಂತೆ ಮನವಿ ಮಾಡಿಕೊಂಡರು.

TV9 Kannada


Leave a Reply

Your email address will not be published. Required fields are marked *