ಶುಕ್ರವಾರದ ಪ್ರಾರ್ಥನೆ ವೇಳೆ ಸಿಡಿದ ಬಾಂಬ್; 50 ಕ್ಕೂ ಹೆಚ್ಚು ಮಂದಿ ಸಾವು

ಕಾಬೂಲ್: ಅಫ್ಘಾನಿಸ್ತಾನದ ​ಕುಂಡುಜ್​ ನಗರದಲ್ಲಿ ಮಸೀದಿಯೊಂದರ ಮೇಲೆ ಬಾಂಬ್ ದಾಳಿ ನಡೆದಿದೆ. ದಾಳಿಯಲ್ಲಿ 50 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಶಿಯಾ ಮಸೀದಿಯನ್ನು ಗುರಿಯಾಗಿಸಿಕೊಂಡು ಈ ಬಾಂಬ್ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಇದೆ. ಬಾಂಬ್ ದಾಳಿಯ ಹಿಂದಿನ ಕೈವಾಡ ಯಾರದೆಂಬುದು ಇನ್ನಷ್ಟೇ ತಿಳಿದುಬರಬೇಕಿದೆ.

ಶುಕ್ರವಾರದ ಪ್ರಾರ್ಥನೆಯಲ್ಲಿ ಜನರು ತೊಡಗಿದ್ದ ವೇಳೆ ಬಾಂಬ್ ಸ್ಫೋಟಗೊಂಡಿದೆ. ಘಟನೆಯಲ್ಲಿ ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇನ್ನು ಸಾವಿನ ಸಂಖ್ಯೆ ಮತ್ತಷ್ಟು ಏರಿಕೆ ಕಾಣುವ ಸಾಧ್ಯತೆ ಇದೆ.

News First Live Kannada

Leave a comment

Your email address will not be published. Required fields are marked *