ನಾಗಶೇಖರ್ ನಿರ್ದೇಶನದ  ಶ್ರೀಕೃಷ್ಣ@Gmail.com ಸಿನಿಮಾದಲ್ಲಿ ರಿಷಬ್ ಶೆಟ್ಟಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ ಸಿನಿಮಾ ತಯಾರಾಗುತ್ತಿದ್ದು, ಲವ್ ಮಾಕ್ಟೇಲ್ ಹೀರೋ ಕೃಷ್ಣ ಮತ್ತು ಭಾವನಾ ಹಾಗೂ ದತ್ತಣ್ಣ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

 ಶ್ರೀಕೃಷ್ಣ@Gmail.com ಮತ್ತು  ಮೊಟ್ಟ ಮೊದಲ ಬಾರಿಗೆ ನಾಗಶೇಖರ್ ತೆಲಗು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ.  ಕನ್ನಡದ  ಶ್ರೀಕೃಷ್ಣ@Gmail.com ಸಿನಿಮಾದಲ್ಲಿ ರಿಷಬ್ ಶೆಟ್ಟಿ ಕೂಡ ನಟಿಸುತ್ತಿದ್ದು ಏಪ್ರಿಲ್ 15 ರಂದು ಶೂಟಿಂಗ್ ನಲ್ಲಿ ಭಾಗವಹಿಸಲಿದ್ದಾರೆ.

ಇದೊಂದು ರೋಮ್ಯಾಂಟಿಕ್ ಸಿನಿಮಾವಾಗಿದ್ದು ಅತ್ಯದ್ಭುತ ಕಥೆ ಹೊಂದಿದೆ, ಭಾವನಾ ವಕೀಲೆ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂದೇಶ್ ಪ್ರೊಡಕ್ಷನ್ ನಲ್ಲಿ ಸಿನಿಮಾ ನಿರ್ಮಾಣವಾಗುತ್ತಿದೆ. 

ಪ್ರಿತಂ ಗುಬ್ಬಿ ಸಿನಿಮಾಗೆ ಸಂಭಾಷಣೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿದ್ದು, ಕವಿರಾಜ್ ಸಾಹಿತ್ಯ ಬರೆದಿದ್ದಾರೆ.

ಸದ್ಯ ರಿಷಬ್ ಶೆಟ್ಟಿ ಹರಿಕಥೆ ಅಲ್ಲ ಗಿರಿಕಥೆ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿಯಾಗಿದ್ದಾರೆ, ಜೂನ್ ತಿಂಗಳಲ್ಲಿ ಬೆಲ್ ಬಾಟಮ್-2 ಸಿನಿಮಾ ಕೂಡ ಶೂಟಿಂಗ್ ಆರಂಭವಾಗಲಿದೆ. 

Source: Kannadaprabha – ಸಿನಿಮಾ ಸುದ್ದಿ – https://www.kannadaprabha.com/cinema/news/
Read More