ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಂಧಿಸಿ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ದೂರು ನೀಡಿದ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ | Welfare of India Party District Secretary lodged a complaint against Sri Ram Sene chief Pramod Muthalik


ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಬಂಧಿಸಿ ಕ್ರಮ ಕೈಗೊಳ್ಳುವಂತೆ ಎಸ್ಪಿಗೆ ದೂರು ನೀಡಿದ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ

ಶ್ರೀರಾಮಸೇನೆಯ ನಾಯಕ ಪ್ರಮೋದ್ ಮುತಾಲಿಕ್

ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ತುಮಕೂರು. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ತುಮಕೂರು ಎಸ್ಪಿಗೆ ದೂರು ನೀಡಲಾಗಿದೆ. ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕರನ್ನು ಬಂಧಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳವಂತೆ ವೆಲ್ಫೇರ್ ಆಫ್ ಇಂಡಿಯಾ ಪಕ್ಷದ ಜಿಲ್ಲಾಧ್ಯಕ್ಷ ತಾಜುದ್ದೀನ್ ಷರೀಫ್ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ದೂರು ಸಲ್ಲಿಸಿದ್ದಾರೆ.

ಮೈಕ್ ಬಳಕೆ ವಿಚಾರದಲ್ಲಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದಾದರೆ ಅಧಿಕಾರ ಬಿಟ್ಟು ಕೆಳಗಿಳಿಯಲಿ. ಕೋರ್ಟ್ ಆದೇಶ ಪಾಲಿಸದವರಿಗೆ ಗುಂಡು ಹೊಡೆಯುವ ಆದೇಶ ಜಾರಿಗೊಳಿಸ್ತೇವೆ ಎಂದು ಪ್ರಮೋದ್ ಮುತಾಲಿಕ್ ಹೇಳಿಕೆ ನೀಡಿದ್ದರು. ಹೀಗಾಗಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ವೆಲ್ಫೇರ್ ಆಫ್ ಇಂಡಿಯಾ ಪಕ್ಷ, ಮುತಾಲಿಕ್ ಸಮಾಜದಲ್ಲಿ ಸಾಮರಸ್ಯ ಕದಡುವ ಪ್ರಚೋದನಕಾರಿ ಹೇಳಿಕೆ‌ ನೀಡಿದ್ದಾರೆಂದು ದೂರು ನೀಡಿದ್ದಾರೆ. ಪ್ರಮೋದ್ ಮುತಾಲಿಕ್ ರನ್ನ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರಿನಲ್ಲಿ ಮನವಿ ಮಾಡಿದ್ದಾರೆ.

TV9 Kannada


Leave a Reply

Your email address will not be published.