ಬೆಂಗಳೂರು: ನಟ ಸಂಚಾರಿ ವಿಜಯ್ ಆರೋಗ್ಯಕ್ಕೆ ಸಂಬಂಧಿಸಿದಂತೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿರುವ ಅಪೋಲೋ ಆಸ್ಪತ್ರೆ ಸಂಚಾರಿ ವಿಜಯ್ ಅವರ ಆರೋಗ್ಯ ಸ್ಥಿತಿ ತುಂಬಾ ಗಂಭೀರವಾಗಿದ್ದು ಕೋಮಾ ಸ್ಥಿತಿಯಲ್ಲಿದ್ದಾರೆ ಎಂದು ಹೇಳಿದೆ.

ಆಕ್ಸಿಡೆಂಟ್ ಆದ ನಂತರ ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆಗಲೇ ಅವರ ಪರಿಸ್ಥಿತಿ ಗಂಭೀರವಾಗಿತ್ತು. ಮೆದುಳಿನ ಸಿಟಿ ಸ್ಕ್ಯಾನ್ ಮಾಡಿದಾಗ ಮೆದುಳಿಗೆ ಆಳವಾದ ಗಾಯವಾಗಿರುವುದು ಪತ್ತೆಯಾಯ್ತು.. ಮೆದುಳಿನ ಸರ್ಜರಿ ಮಾಡಿ ರಕ್ತಸ್ರಾವವನ್ನ ತೆಗೆಯಲಾಗಿದೆ. ಸದ್ಯ ಅವರು ನ್ಯೂರೋ ಐಸಿಯೂನಲ್ಲಿದ್ದಾರೆ. ಅವರು ಕೋಮಾ ಸ್ಥಿತಿಯಲ್ಲೇ ಮುಂದುವರೆಯುತ್ತಿದ್ದು ಬಹಳ ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರ ಆರೋಗ್ಯ ಸ್ಥಿತಿಯನ್ನು ನಿರಂತರವಾಗಿ ಪರೀಕ್ಷಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಪೋಲೋ ಆಸ್ಪತ್ರೆ ತನ್ನ ಹೆಲ್ತ್ ಬುಲೆಟಿನ್​ನಲ್ಲಿ ಹೇಳಿದೆ.

The post ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಗಂಭೀರವಾಗಿಯೇ ಇದೆ -ಅಪೋಲೋ ಆಸ್ಪತ್ರೆ appeared first on News First Kannada.

Source: newsfirstlive.com

Source link