ನವದೆಹಲಿ: ಇಂದಿನಿಂದ ಸಂಸತ್ತಿನ ಮುಂಗಾರು ಅಧಿವೇಶನ ಶುರುವಾಗಲಿದೆ. ವಿರೋಧ ಪಕ್ಷದ ನಾಯಕರು ಕೊರೋನಾ ಕುರಿತು ಅತಿ ತೀಕ್ಷ್ಣ ಪ್ರಶ್ನೆಗಳನ್ನು ಸರ್ಕಾರಕ್ಕೆ ಕೇಳಲಿ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ.

ಮುಂಗಾರು ಅಧಿವೇಶನಕ್ಕೆ ಮುನ್ನ ಸುದ್ದಿಗಾರರೊಂದಿಗೆ ಮಾತಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ವಿರೋಧ ಪಕ್ಷಗಳು ಕಠಿಣ ಪ್ರಶ್ನೆಗಳನ್ನು ಕೇಳಬೇಕು. ಹಾಗೆಯೇ ವಿಪಕ್ಷಗಳ ಪ್ರಶ್ನೆಗಳಿಗೆ ಸರ್ಕಾರ ಉತ್ತರ ನೀಡಲು ಅವಕಾಶ ಮಾಡಿಕೊಡಬೇಕು ಎಂದರು.

ಅತಿ ತೀಕ್ಷ್ಣವಾಗಿ ಪ್ರಶ್ನೆ ಕೇಳುವುದು ಮತ್ತು ಸರ್ಕಾರದಿಂದ ಉತ್ತರ ಪಡೆಯುವುದು ಆರೋಗ್ಯಕರ ಬೆಳವಣಿಗೆ. ಇದು ಪ್ರಜಾಪ್ರಭುತ್ವ ಮತ್ತು ಜನರ ನಂಬಿಕೆಯನ್ನು ಬಲವರ್ಧನೆಗೊಳಿಸುತ್ತದೆ ಎಂದರು ಪ್ರಧಾನಿ ಮೋದಿ.

The post ಸಂಸತ್​​ನಲ್ಲಿ ವಿಪಕ್ಷಗಳು ಕೊರೋನಾ ಬಗ್ಗೆ ಅತಿ ತೀಕ್ಷ್ಣ ಪ್ರಶ್ನೆಗಳು ಕೇಳಲಿ; ಪ್ರಧಾನಿ ನರೇಂದ್ರ ಮೋದಿ appeared first on News First Kannada.

Source: newsfirstlive.com

Source link