ನವದೆಹಲಿ: ದಿ.ಸುರೇಶ್​ ಅಂಗಡಿ ಪತ್ನಿ, ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದೆ ಮಂಗಳ ಅಂಗಡಿ ಅವರಿಗೆ ಕೇಂದ್ರ ಸರ್ಕಾರದಿಂದ ಹೊಸ ಜವಾಬ್ದಾರಿ ನೀಡಲಾಗಿದೆ.

ಮಂಗಳ ಅವರನ್ನ ಹಡಗು ಮತ್ತು ಜಲಮಾರ್ಗ ಸಚಿವಾಲಯ ಸಲಹಾ ಸಮಿತಿಗೆ ನೇಮಕ ಮಾಡಲಾಗಿದೆ. ಲೋಕಸಭಾ ಉಪಚುನಾವಣೆಯಲ್ಲಿ ಗೆದ್ದು ಸಂಸದೆಯಾಗಿ ಆಯ್ಕೆಯಾದ ಎರಡು ತಿಂಗಳಲ್ಲೆ ಮಂಗಳ ಅಂಗಡಿ ಸಲಹಾ ಸಮಿತಿಯ ಸದಸ್ಯರಾಗಿ ನೇಮಕವಾಗಿದ್ದಾರೆ.

ಕೇಂದ್ರ ಸಚಿವರಾಗಿದ್ದ ದಿವಂಗತ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಮಂಗಳ ಅಂಗಡಿ ಸ್ಪರ್ಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ವಿರುದ್ಧ ಅವರು ಜಯಭೇರಿ ಬಾರಿಸಿದ್ದರು.

 

The post ಸಂಸದೆ ಮಂಗಳ ಅಂಗಡಿಗೆ ಕೇಂದ್ರ ಸರ್ಕಾರದಿಂದ ಹೊಸ ಜವಾಬ್ದಾರಿ appeared first on News First Kannada.

Source: newsfirstlive.com

Source link