ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಪುಟ ಸಚಿವರ ಒಂದು ವರ್ಷದ ವೇತನವನ್ನ ಕೋವಿಡ್​ ಪರಿಹಾರ ನಿಧಿಗೆ ದೇಣಿಗೆಯಾಗಿ ನೀಡಲು ಸಿಎಂ ಸೂಚಿಸಿದ್ದಾರೆ.

ಅಲ್ಲದೇ ಈ ಬಗ್ಗೆ ರಾಜ್ಯ ಸರ್ಕಾರ ಆದೇಶ ಕೂಡ ಹೊರಡಿಸಿದೆ. 2021ರ ಮೇ 1 ರಿಂದ ಜಾರಿಗೆ ಬರುವಂತೆ ಒಂದು ವರ್ಷದ ವೇತನವನ್ನು ಕೋವಿಡ್-19 ಪರಿಹಾರವಾಗಿ ನೀಡುವುದಾಗಿ ಸಿಎಂ ಸೂಚನೆ ನೀಡಿದ್ದಾರೆ. ರಾಜ್ಯದಲ್ಲಿ ಹೆಚ್ಚಳವಾಗುತ್ತಿರುವ ಕೊರೊನಾ ಸೋಂಕು ನಿಯಂತ್ರಣಕ್ಕೆ ಅನುಕೂಲವಾಗುವಂತೆ ಸಚಿವರ ಒಂದು ವರ್ಷದ ವೇತನವನ್ನ ಕೋವಿಡ್-19 ಪರಿಹಾರ ನಿಧಿಗೆ ದೇಣಿಗೆಯಾಗಿ ಪಾವತಿಸುವಂತೆ ಸಿಎಂ ಯಡಿಯೂರಪ್ಪ ಸೂಚಿಸಿ ಆದೇಶ ಹೊರಡಿಸಿದ್ದಾರೆ.

The post ಸಚಿವರ ಒಂದು ವರ್ಷದ ವೇತನ ‘ಕೋವಿಡ್-19 ಪರಿಹಾರ ನಿಧಿ’ಗೆ ನೀಡಲು ಆದೇಶ appeared first on News First Kannada.

Source: newsfirstlive.com

Source link