ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್ | Karnataka High Court to BBMP on Bengaluru Potholes issue

ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು; ಬಡವರ ಮನೆ ಬಳಿ ರಸ್ತೆಯೂ ಸರಿಯಾಗಬೇಕು: ಹೈಕೋರ್ಟ್

ಕರ್ನಾಟಕ ಹೈಕೋರ್ಟ್​

ಬೆಂಗಳೂರು: ನಗರದ ರಸ್ತೆ ಗುಂಡಿ‌ ಮುಚ್ಚುವ ವಿಚಾರವಾಗಿ ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಹೈಕೋರ್ಟ್ ತಾಕೀತು ಮಾಡಿದೆ. ಮುಚ್ಚಿದ ಗುಂಡಿಗಳು 2- 3 ತಿಂಗಳಲ್ಲಿ ಮತ್ತೆ ಗುಂಡಿ ಬೀಳುತ್ತಿವೆ. ಪದೇಪದೆ ಗುಂಡಿಯಾಗದಂತೆ ಕಾಮಗಾರಿ ನಡೆಸಿ. ಕೇವಲ ಸಚಿವರ ಮನೆ ಬಳಿ ರಸ್ತೆ ಉತ್ತಮಗೊಂಡರೆ ಸಾಲದು. ಬಡವರ ಮನೆ ಬಳಿಯ ರಸ್ತೆಯೂ ಸರಿಯಾಗಬೇಕು ಎಂದು ಬಿಬಿಎಂಪಿಗೆ ಹೈಕೋರ್ಟ್ ವಿಭಾಗೀಯ ಪೀಠ ನಿರ್ದೇಶನ ನೀಡಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಬಿಬಿಎಂಪಿಗೆ ಸೂಚನೆ ನೀಡಲಾಗಿದೆ.

ಬೆಂಗಳೂರಿನಲ್ಲಿನ ರಸ್ತೆ ಗುಂಡಿಗಳ ಬಗ್ಗೆ ವರದಿ ತಯಾರಿಸಲು ಕಾರ್ಯಪಡೆ ರಚಿಸಲು ನಿರ್ಧರಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದರು. ರಸ್ತೆ ಗುಣಮಟ್ಟದ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ. ಕಳಪೆ ಕಾಮಗಾರಿಯಿಂದ ಗುಂಡಿಗಳು ಬಿದ್ದಿದ್ದರೆ ಗುತ್ತಿಗೆದಾರನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಬೊಮ್ಮಾಯಿ ಅಕ್ಟೋಬರ್ 6ರಂದು ಮೈಸೂರಿನಲ್ಲಿ ಎಚ್ಚರಿಸಿದ್ದರು.

ಯಾವ ಅವಧಿಯಲ್ಲಿ ರಸ್ತೆ ಆಗಿದೆ? ರಸ್ತೆಗಳನ್ನು ನಿರ್ಮಿಸುವಾಗ ಗುಣಮಟ್ಟ ಕಾಪಾಡಲಾಗಿದೆಯೇ ಎಂಬ ಬಗ್ಗೆ ವಿಸ್ತೃತ ವರದಿ ತರಿಸಿಕೊಳ್ಳುತ್ತೇನೆ‌. ಕಳಪೆ ಕಾಮಗಾರಿಯಿಂದ ರಸ್ತೆಯಲ್ಲಿ ಗುಂಡಿ ಬಿದ್ದಿದ್ದರೆ ಗುತ್ತಿಗೆದಾರನ ಮೇಲೆ ಕ್ರಮ ತೆಗೆದುಕೊಳ್ಳುವುದು ನಿಶ್ಚಿತ ಎಂದು ಹೇಳಿದ್ದರು. ಮಳೆ ಬಂದಾಗ ಮಾತ್ರ ಈ ವಿಚಾರ ಚರ್ಚೆ ಮಾಡಿ ನಂತರ ಸುಮ್ಮನಾಗುವುದಿಲ್ಲ. ಈ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಮಳೆ ಬಂದಾಗ ನಿರಂತರ ನೀರು ತುಂಬುವ ಪ್ರದೇಶ ಗುರುತು ಮಾಡಲಾಗಿದೆ. ಅದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲಾಗುತ್ತದೆ ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆ ನೀಡಿದ್ದರು.

ಬೆಂಗಳೂರಲ್ಲಿ ಕೇವಲ 194 ರಸ್ತೆ ಗುಂಡಿ ಇವೆ ಎಂದ ಬಿಬಿಎಂಪಿ
ರಸ್ತೆ ಗುಂಡಿಗಳ ಬಗ್ಗೆ ಬಿಬಿಎಂಪಿ ಸುಳ್ಳು ಲೆಕ್ಕ ನೀಡಿದೆ. ಬೆಂಗಳೂರಲ್ಲಿ ಕೇವಲ 194 ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ (BBMP) ವರದಿ ನೀಡಿತ್ತು. ಆದರೆ ಟಿವಿ9 ರಿಯಾಲಿಟಿ ಚೆಕ್​ನಲ್ಲಿ ಬಿಬಿಎಂಪಿ ಸುಳ್ಳು ಲೆಕ್ಕ ಬಯಲಾಗಿದೆ. ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಅಧಿಕಾರಿಗಳು ತಪ್ಪು ಲೆಕ್ಕ ಕೊಟ್ಟಿದ್ದಾರೆ. ಸೆಪ್ಟೆಂಬರ್ 6 ರಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ ಗುಪ್ತ ಬೆಂಗಳೂರಿನ ರಸ್ತೆ ಗುಂಡಿಗಳನ್ನು ಮುಚ್ಚಲು ಗಡುವು ನೀಡಿದ್ದರು. ಅದರಂತೆ ಸೆಪ್ಟೆಂಬರ್ 21 ರ ಒಳಗೆ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಸೂಚನೆ ನೀಡಿದ್ದರು. ಆದರೆ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನಲ್ಲಿನ ರಸ್ತೆಯಲ್ಲಿ ಕೇವಲ 194 ಗುಂಡಿಗಳಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ಗೌರವ ಗುಪ್ತ ಅವರಿಗೆ ಲೆಕ್ಕ ತೋರಿಸಿದೆ.

ಸೆಪ್ಟೆಂಬರ್ 6 ರಂದು ಬೆಂಗಳೂರಿನಲ್ಲಿ 1138 ರಸ್ತೆ ಗುಂಡಿಗಳಿವೆ ಎಂದು ಬಿಬಿಎಂಪಿ ಅಧಿಕಾರಿಗಳು ಹೇಳಿದ್ದರು. ನಂತರ ಸೆಪ್ಟೆಂಬರ್ 21 ರಂದು ಎಲ್ಲಾ ಗುಂಡಿಗಳನ್ನು ಮುಚ್ಚಿದ್ದು, 194 ರಸ್ತೆ ಗುಂಡಿಗಳು ಮಾತ್ರ ಬಾಕಿ ಇವೆ ಎಂದು ಲೆಕ್ಕ ನೀಡಿದ್ದಾರೆ. ಸದ್ಯ ಬಿಬಿಎಂಪಿ ಲೆಕ್ಕ ಸುಳ್ಳು ಎಂಬುವುದು ರೂಜುವಾಗಿದೆ. ಏಕೆಂದರೆ ಬೆಂಗಳೂರಿನ ಹೃದಯ ಭಾಗದಲ್ಲಿ ರಸ್ತೆ ಗುಂಡಿಗಳ ಸಂಖ್ಯೆ ಎಣಿಕೆಗೆ ಸಿಗದಂತಾಗಿದೆ.

ಇದನ್ನೂ ಓದಿ: ರಸ್ತೆ ಗುಂಡಿಯಲ್ಲಿ ಬಿದ್ದು ಬೈಕ್ ಓಡಿಸುತ್ತಿದ್ದ ಬಿಜೆಪಿ ಮುಖಂಡ ಸಾವು

ಇದನ್ನೂ ಓದಿ: ಬೆಂಗಳೂರಲ್ಲಿ ಕೇವಲ 194 ರಸ್ತೆ ಗುಂಡಿ ಇವೆ ಎಂದ ಬಿಬಿಎಂಪಿ; ಟಿವಿ9 ರಿಯಾಲಿಟ್ ಚೆಕ್​ನಲ್ಲಿ ಸುಳ್ಳು ಲೆಕ್ಕ ಬಯಲು

TV9 Kannada

Leave a comment

Your email address will not be published. Required fields are marked *