ಸಚಿವಾಲಯ ಸೇವೆಯ ಅಧಿಕಾರಿಗಳಿಗೆ ಜನವರಿ 30ರವೆರೆಗೆ ಶೇ. 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ | Expansion of attendance opportunity by 50 percent to Ministry officers in bengaluru


ಸಚಿವಾಲಯ ಸೇವೆಯ ಅಧಿಕಾರಿಗಳಿಗೆ ಜನವರಿ 30ರವೆರೆಗೆ ಶೇ. 50ರಷ್ಟು ಹಾಜರಾತಿ ಅವಕಾಶ ವಿಸ್ತರಣೆ

ಕರ್ನಾಟಕ ಸರ್ಕಾರದ ಸಚಿವಾಲಯ, ವಿಧಾನ ಸೌಧ

ಬೆಂಗಳೂರು: ಸಚಿವಾಲಯ (Ministry) ಸೇವೆಯ ಗ್ರೂಪ್ ಬಿ, ಸಿ, ಡಿ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಜನವರಿ 30ರವರೆಗೆ ಶೇಕಡಾ 50ರಷ್ಟು ಹಾಜರಾತಿ (Attendance) ಅವಕಾಶ ವಿಸ್ತರಣೆ ಮಾಡಲಾಗಿದೆ. ಈ ಹಿಂದೆ ಕೂಡ ರಾಜ್ಯ ಸರ್ಕಾರ (Government) ಹೊಸ ಕಾರ್ಯಸೂಚಿಯನ್ನು ಬಿಡುಗಡೆ ಮಾಡಿತ್ತು. ಅದರಂತೆ ಸಚಿವಾಲಯದ ಅಧಿಕಾರಿಗಳು ಮುಂಚಿತವಾಗಿ ನಿಗದಿಪಡಿಸಲಾಗಿರುವ ಭೇಟಿಗೆ ಆಗಮಿಸುವ ಇಲಾಖೆಯ ಸಿಬ್ಬಂದಿಗಳಿಗೆ ಎರಡು ಡೋಸ್​ ಲಸಿಕೆಯಾಗಿರಬೇಕು ಎಂದು ಸುತ್ತೋಲೆಯಲ್ಲಿ ಸ್ಪಷ್ಟಪಡಿಸಲಾಗಿತ್ತು. ಇಂದು ಸಚಿವಾಲಯ ವೃಂದದ ಅಧಿಕಾರಿ ಮತ್ತು ಸಿಬ್ಬಂದಿಗೆ ಹಾಜರಾತಿ ವಿಸ್ತರಣೆಯ ಆದೇಶ ನೀಡಲಾಗಿದೆ.

ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನಿಸಿದ ಸರ್ಕಾರ

ಅತಿಥಿ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಅರ್ಜಿ ಆಹ್ವಾನಿಸಿದೆ. 2021-22ನೇ ಶೈಕ್ಷಣಿಕ ಸಾಲಿಗೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದ್ದು, ಅರ್ಹರು ಅರ್ಜಿಸಲ್ಲಿಸಲು ಜನವರಿ 31 ಕೊನೆಯ ದಿನಾಂಕವಾಗಿದೆ. ಸರ್ಕಾರಿ ಪ್ರಥಮ ದರ್ಜೆಯ ಕಾಲೇಜುಗಳಲ್ಲಿ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹೆಚ್ಚುವರಿ ಬೋಧನಾ ಕಾರ್ಯಭಾರಕ್ಕೆ ಉಪನ್ಯಾಸಕರ ನೇಮಕಕ್ಕೆ ಸರ್ಕಾರ ಮುಂದಾಗಿದೆ. ಈ ಕುರಿತು ಇಂದು ಕಾಲೇಜು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು:ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರಿಗೆ ವೇತನ ಹೆಚ್ಚಳ

ಕರ್ನಾಟಕ ಸರ್ಕಾರವು ಸರ್ಕಾರಿ ಪದವಿ ಕಾಲೇಜು ಅತಿಥಿ ಉಪನ್ಯಾಸಕರ ವೇತನ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇಡೀ ಶೈಕ್ಷಣಿಕ ವರ್ಷಕ್ಕೆ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲಿದ್ದು, ಯುಜಿಸಿ ನಿಯಮ ಅನುಸರಿಸಿ ಅರ್ಹತೆಯನ್ನು ನಿಗದಿಪಡಿಸಲಾಗಿದೆ. ಈವರೆಗೆ ₹ 13,000 ವೇತನ ಪಡೆಯುತ್ತಿದ್ದವರು ಮುಂದಿನ ದಿನಗಳಲ್ಲಿ ₹ 32,000 ಪಡೆಯಲಿದ್ದಾರೆ. ₹ 11,000 ವೇತನ ಪಡೆಯುತ್ತಿದ್ದವರು ₹ 28,000 ಪಡೆಯಲಿದ್ದಾರೆ. ಪ್ರತಿ ತಿಂಗಳ 10ನೇ ತಾರೀಖಿನೊಳಗೆ ವೇತನ ಪಾವತಿಗೆ ವ್ಯವಸ್ಥೆ ರೂಪಿಸಲಾಗುವುದು ಎಂದು ಸರ್ಕಾರವು ಭರವಸೆ ನೀಡಿದೆ. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅತಿಥಿ ಉಪನ್ಯಾಸಕರು ಕಳೆದ ಒಂದು ತಿಂಗಳಿನಿಂದ ತರಗತಿಗಳನ್ನು ಬಹಿಷ್ಕರಿಸಿ ಹೋರಾಟ ನಡೆಸುತ್ತಿದ್ದರು. ಹೋರಾಟದ ನಂತರ ಎಚ್ಚೆತ್ತ ಸರ್ಕಾರವು ಉಪನ್ಯಾಸಕರಿಗೆ ಹಲವು ಸೌಲಭ್ಯಗಳನ್ನು ಒದಗಿಸಲು ಮುಂದಾಗಿತ್ತು.

TV9 Kannada


Leave a Reply

Your email address will not be published. Required fields are marked *