ಉಡುಪಿ: ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರ ಅಧಿಕೃತ ಟ್ವಿಟರ್ ಖಾತೆ ಹ್ಯಾಕ್ ಆಗಿದೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಖುದ್ದಾಗಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಮಾಹಿತಿ ಹಂಚಿಕೊಂಡಿದ್ದು, ಹ್ಯಾಕ್ ಆಗಿರುವ ಖಾತೆಯ ಪರಿಶೀಲನೆಗೆ ಈಗಾಗಲೇ ಮನವಿ ಮಾಡಲಾಗಿದೆ. ಅಧಿಕೃತವಾಗಿ ಘೋಷಿಸುವವರೆಗೂ ಟ್ವಿಟರ್ ಮೂಲಕ ಬರುವ ಯಾವುದೇ ಸಂದೇಶ ಪರಿಗಣಿಸಬೇಡಿ ಎಂದು ಸಚಿವರು ಮನವಿ ಮಾಡಿದ್ದಾರೆ.